ಬೆಂಗಳೂರು: ರಜತ್ ಜೊತೆ ನನ್ನ ಫ್ರೆಂಡ್ ಶಿಪ್ ಕಟ್ ಆಗಿಲ್ಲ. ಸಣ್ಣ ಸಣ್ಣ ವಿಷಯಕ್ಕೆ ಫ್ರೆಂಡ್ ಶಿಪ್ ಕಟ್ ಮಾಡ್ಕೊಳ್ಳೋವನು ನಾನಲ್ಲ ಎಂದು ವಿನಯ್ ಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣದ ನಂತರ ರಜತ್ ನಿಂದ ವಿನಯ್ ಗೌಡ ಅಂತರ ಕಾಯ್ದುಕೊಂಡಿದ್ದರು. ಈ ವಿಚಾರವಾಗಿ ವಿನಯ್ ಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ರಜತ್ ಜೊತೆ ನನ್ನ ಫ್ರೆಂಡ್ ಶಿಪ್ ಕಟ್ ಆಗಿಲ್ಲ. ಸಣ್ಣ ಸಣ್ಣ ವಿಷಯಕ್ಕೆ ಫ್ರೆಂಡ್ ಶಿಪ್ ಕಟ್ ಮಾಡ್ಕೊಳ್ಳೋವನು ನಾನಲ್ಲ. ಅವನು ನನ್ನನ್ನ ಎಲ್ಲೂ ಬಿಟ್ಟುಕೊಟ್ಟಿಲ್ಲ. ನಾನೂ ಬಿಟ್ಟು ಕೊಡಲ್ಲ, ಸ್ನೇಹಿತರ ಸಂಬಂಧ ಗಂಡ ಹೆಂಡತಿ ಜಗಳ ಇದ್ದಂತೆ, ಎರಡ್ಮೂರು ದಿನ ಇರುಸು–ಮುರುಸು ಇರುತ್ತೆ, ಹಾಗೇ ಬಿಟ್ರೆ ಅದಾಗೇ ಸರಿ ಹೋಗುತ್ತೆ ಅಂತ ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW