ತುರುವೇಕೆರೆ: ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ , ಸಂಸ್ಥೆಯ ಅಧಿಕಾರೇತರ ಅಧ್ಯಕ್ಷರಾಗಿ ತುರುವೇಕೆರೆ ಶಾಸಕ ಮಸಾಲಾ ಜಯರಾಮ್ ಅವರನ್ನು ನಾಮನಿರ್ದೇಶನ ಮಾಡಿ ಕರ್ನಾಟಕ ರಾಜ್ಯ ಸರ್ಕಾರ ಆದೇಶಿಸಿದೆ.
ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನ ಸಂಘದ ನಿಯಮಗಳ ಅಂತರ್ ನಿಯಮ 11(4) ರ ಪ್ರದತ್ತವಾದ ಅಧಿಕಾರದನ್ವಯ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಮಸಾಲಾ ಜಯರಾಮ್ ಅವರನ್ನು ಸಂಸ್ಥೆಯ ಅಧಿಕಾರೇತರ ಅಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಾಮನಿರ್ದೇಶನ ಮಾಡಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ (ಗಣಿ 1) ಯ ಸರ್ಕಾರದ ಅಧೀನ ಕಾರ್ಯದರ್ಶಿ ಶಿವಪ್ರಕಾಶ್ ಅವರು ರಾಜ್ಯಪಾಲರ ಆಜ್ಞಾನುಸಾರ ಆದೇಶ ಹೊರಡಿಸಿದ್ದಾರೆ.
ಶಾಸಕರಾದ ಮಸಾಲ ಜಯರಾಮ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸರ್ಕಾರದ ಸಚಿವರುಗಳಿಗೆ ಅಭಿಮಾನಿಗಳು, ಬೆಂಬಲಿಗರು ಅಭಿನಂದನೆ ಸಲ್ಲಿಸಿದ್ದಾರೆ.
ವರದಿ: ಸುರೇಶ್ ಬಾಬು ಎಂ., ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy