ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು ಈ ನಡುವೆ ಇಂದು ಸಿಂಹಾಸನ ಜೋಡಣಾ ಕಾರ್ಯ ನಡೆಯುತ್ತಿರುವ ಹಿನ್ನೆಲೆ ಅರಮನೆಗೆ ಸಾರ್ವಜನಿಕ ಪ್ರವೇಶ ನಿರ್ಬಂಧ ವಿಧಿಸಲಾಗಿದೆ.
ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆವರಗೆ ಅರಮನೆಗೆ ಸಾರ್ವಜನಿಕರ ಪ್ರವೇಶ ಬಂದ್ ಮಾಡಲಾಗಿದೆ. ರತ್ನಖಚಿತ ಸಿಂಹಾಸನ ಜೋಡಣಾ ಕಾರ್ಯ ಆರಂಭವಾಗಿದ್ದು ಸ್ಟ್ರಾಂಗ್ ರೂಂನಲ್ಲಿರುವ ಸಿಂಹಾಸನ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಜೋಡಣೆ ಮಾಡಲಾಗುತ್ತಿದೆ.
ದರ್ಬಾರ್ ಹಾಲ್‌ನಲ್ಲಿ ಪೂಜಾ ಕೈಂಕರ್ಯ ನೆರವೇರಿದ್ದು, ಕನ್ನಡಿ ತೊಟ್ಟಿಯಲ್ಲಿ ಭದ್ರಾಸನ ಜೋಡಣೆ, ಅರಮನೆಯ ಪುರೋಹಿತರ ಸಮ್ಮುಖದಲ್ಲಿ ಗಣಪತಿ ಹೋಮ, ಚಾಮುಂಡಿಪೂಜೆ, ಶಾಂತಿ ಹೋಮ ಮಾಡಲಾಗುತ್ತಿದೆ.
ನವರಾತ್ರಿ ವೇಳೆ ರಾಜರು ಸಿಂಹಾಸನರೂಢರಾಗಿ ಖಾಸಗಿ ದರ್ಬಾರ್ ನಡೆಸುವ ಸಂಪ್ರದಾಯವಿದ್ದು ಅಂತೆಯೇ ಸೆ.26 ರಿಂದ ಖಾಸಗಿ ದರ್ಬಾರ್ ನಡೆಯಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy