ಬೆಂಗಳೂರು: ಪ್ರಸಕ್ತ ಸಾಲಿನ ಮೈಸೂರು ದಸರಾ ಕಾರ್ಯಕ್ರಮವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉದ್ಘಾಟಿಸಲಿದ್ದಾರೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದಂತ ಅವರು, ಮೈಸೂರು ದಸರಾ ಮಹೋತ್ಸವವನ್ನು ಯಾರು ಉದ್ಘಾಟಿಸಬೇಕು ಎಂಬುದಾಗಿ ಚರ್ಚಿಸಲಾಗಿತ್ತು.
ಆ ಚರ್ಚೆಯಂತೆ ಈ ಬಾರಿ ಮೈಸೂರು ದಸರಾವನ್ನು ರಾಷ್ಟ್ರಪತಿ ದ್ರೌಪತಿ ಮುರ್ಮು ಉದ್ಘಾಟಿಸಲು ಆಹ್ವಾನಿಸಲು ನಿರ್ಧರಿಸಲಾಗಿದೆ. ಹೀಗಾಗಿ ಈ ಬಾರಿಯ ಮೈಸೂರು ದಸರಾವನ್ನು ದ್ರೌಪದಿ ಮುರ್ಮು ಅವರು ಉದ್ಘಾಟಿಸಲಿದ್ದಾರೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz