ತುಮಕೂರು: ಜಗತ್ಪ್ರಸಿದ್ಧ ಮೈಸೂರು ದಸರಾ ಉತ್ಸವದ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 3 ರಿಂದ 11ರವರೆಗೆ ಮೈಸೂರಿನ ಹಳೆಯ ಡಿ.ಸಿ. ಕಚೇರಿ ಬಳಿ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ “ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2024”ನ್ನು ಏರ್ಪಡಿಸಲಾಗಿದೆ.
ಈ ಮೇಳದಲ್ಲಿ ಕನ್ನಡ ಪ್ರಕಾಶಕರು/ ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ 1,000 ರೂ.ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಇವರ ಹೆಸರಿನಲ್ಲಿ ಸಲ್ಲಿಸಬೇಕು.
ಆಸಕ್ತರು ಕನ್ನಡ ಪುಸ್ತಕ ಪ್ರಾಧಿಕಾರ ಕಚೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕಚೇರಿ ಅಥವಾ ಪ್ರಾಧಿಕಾರದ ವೆಬ್ ಸೈಟ್ https://kpp.karnataka.gov.in ನಿಂದ ಉಚಿತವಾಗಿ ನಿಗಧಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ 1,000 ರೂ.ಗಳ ಡಿ.ಡಿ. ಲಗತ್ತಿಸಿ ಸೆಪ್ಟೆಂಬರ್ 30ರ ಸಂಜೆ 5 ಗಂಟೆಯೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ಅಂಚೆ ಹಾಗೂ ಇ-ಮೇಲ್ kannadappradhikara@gmail.com ಮೂಲಕ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ.080-22484516/ 22107704ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q