ಮೈಸೂರು : ಕೆಲಸ ಹುಡುಕುತ್ತಿರುವ ಪದವೀಧರರಿಗೆ ಆನ್ ಲೈನ್ ಉದ್ಯೋಗ ಮೇಳವನ್ನು , ಕರ್ನಾಟಕ ರಾಜ್ಯ ಮುಕ್ತ ವಿವಿ ಏ.15 ರಿಂದ 30 ರವರೆಗೆ ಆಯೋಜನೆ ಮಾಡಿದ್ದು, ಆಸಕ್ತರು ಇದರಲ್ಲಿ ಭಾಗಿಯಾಗಲು ಈ ಕುರಿತು ಕರ್ನಾಟಕ ರಾಜ್ಯ ಮುಕ್ತ ಕುಲಪತಿ ಪ್ರೊ ಶರಣಪ್ಪ ವಿ ಹಲಸೆ ಮಾಹಿತಿ ನೀಡಿದ್ದು, ಈ ಉದ್ಯೋಗ ಮೇಳದಲ್ಲಿ 10 ಕ್ಕೂ ಹೆಚ್ಚು ಕಂಪನಿಗಳು ಭಾಗಿಯಾಗಲಿದೆ ಎಂದು ತಿಳಿಸಿದರು.
ಇದರಲ್ಲಿ ಬಿ,ಕಾಂ , ಎಂಕಾಂ, ಎಂಬಿಎ ವಿದ್ಯಾರ್ಥಿಗಳು ಭಾಗವಹಿಸಲು ಸೂಚಿಸಲಾಗಿದೆ. 2000 ಕ್ಕೂ ಹೆಚ್ಚು ಉದ್ಯೋಗ ಸಿಗಲಿದೆ ಎಂದು ಮಾಹಿತಿ ನೀಡಿದ್ದಾರೆ.
ಆಸಕ್ತರು ಮೊಬೈಲ್ ನಲ್ಲಿ ಪ್ರೊಪ್ರೈಲ್ ಇನ್ ಅಪ್ಲಿಕೇಶನ್ ಡೌನ್ ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದು. ದಾಖಲೆಗಳನ್ನು ಪರಿಶೀಲಿಸಿ ಅರ್ಹರಿಗೆ ಸಂದರ್ಶನ ನಡೆಸಲಾಗುತ್ತದೆ ಎಂದು ತಿಳಿಸಿದರು.
ಹೆಚ್ಚಿನ ಮಾಹಿತಿಗಾಗಿ 9513373737 ಸಂಪರ್ಕಿಸಬಹುದಾಗಿದೆ ಎಂದು ಪ್ರೊಫೈಲ್ ಇನ್ ಕಂಪನಿ ಮಾಹಿತಿ ನೀಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


