ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಗೆ 43 ವರ್ಷಗಳ ಕಠಿಣ ಶಿಕ್ಷೆ, ₹ 50 ಸಾವಿರ ದಂಡ ವಿಧಿಸಿ ನಗರದ ಪೊಕ್ಸೊ ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ.
ಅಪರಾಧಿಯು ಬಿಹಾರ ಮೂಲದವನಾಗಿದ್ದು, ವಿಶೇಷ ಕೋರ್ಟ್ನ ನ್ಯಾಯಾಧೀಶೆ ಶೈಮಾ ಕಮರೋಜ್ ಈ ತೀರ್ಪು ನೀಡಿದ್ದಾರೆ. ಸಂತ್ರಸ್ತೆಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಕೆ.ಬಿ.ಜಯಂತಿ ವಾದ ಮಂಡಿಸಿದ್ದರು.
2021ರಲ್ಲಿ 10 ವರ್ಷದ ಬಾಲಕಿ ಮೇಲೆ ಆರೋಪಿಯು ನಿರಂತರ ಅತ್ಯಾಚಾರ ಎಸಗಿದ್ದ. ಮೈಸೂರಿನ ಟಿ.ನರಸೀಪುರ ರಸ್ತೆಯ ಫಾರಂಹೌಸ್ ನಲ್ಲಿ ಕೃತ್ಯವೆಸಗಿದ್ದ. ಮೈಸೂರು ಗ್ರಾಮಾಂತರ ಮಹಿಳಾ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


