ತುಮಕೂರು: ಜಗತ್ಪ್ರಸಿದ್ಧ ಮೈಸೂರು ದಸರಾ ಉತ್ಸವ–2026ರ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 11 ರಿಂದ 20ರವರೆಗೆ ಮೈಸೂರು ಹಳೆ ಡಿಸಿ ಕಚೇರಿ ಎದುರಿನ ಸ್ಕೌಟ್ಸ್ ಅಂಡ್ ಗೈಡ್ಸ್ ಮೈದಾನದಲ್ಲಿ ಆಮೈಸೂರು ದಸರಾ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳವನ್ನು ಏರ್ಪಡಿಸಲಾಗಿದೆ.
ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು / ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಭಾಗವಹಿಸಲಿಚ್ಛಿಸುವವರು ಪುಸ್ತಕ ಮಳಿಗೆಯೊಂದಕ್ಕೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಇವರ ಹೆಸರಿನಲ್ಲಿ 1000 ರೂ.ಗಳ ಭದ್ರತಾ ಠೇವಣಿಯನ್ನು ಸಲ್ಲಿಸಬೇಕು.
ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್ಸೈಟ್ https://kpp.karnataka.gov.in ನಲ್ಲಿ ಉಚಿತವಾಗಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಅಕ್ಟೋಬರ್ 5ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಇವರಿಗೆ ಅಂಚೆ ಮೂಲಕ ಹಾಗೂ ಮುದ್ದಾಂ ಮೂಲಕ ಸಲ್ಲಿಸಲು ಕೋರಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080–22484516ನ್ನು ಸಂಪರ್ಕಿಸಬಹುದಾಗಿದೆ ಎಂದು ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
