ತಿಪಟೂರು: ಜನವರಿ 16ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ನಾ ನಾಯಕಿ’ ರಾಜ್ಯ ಕಾಂಗ್ರೆಸ್ ಮಹಿಳಾ ಸಮಾವೇಶ ಆಯೋಜಿಸಲಾಗಿದ್ದು, ಕನಿಷ್ಠ 2000 ಜನ ಮಹಿಳೆಯರು ತಿಪಟೂರಿನಿಂದ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ನ ಮಾಜಿ ಶಾಸಕ ಕೆ.ಷಡಕ್ಷರಿ ತಿಳಿಸಿದರು.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕಿ ಪ್ರಿಯಾಂಕ ವಾದ್ರ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಇಂದಿನಿಂದ ರಾಜ್ಯಾದ್ಯಂತ ಕಾಂಗ್ರೆಸ್ ನಾಯಕರು ಬಸ್ ಯಾತ್ರೆ ಪ್ರಾರಂಭಿಸಿದ್ದು, ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒಟ್ಟಿಗೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದಾರೆ. ಜನವರಿ 24ರಂದು ಬಸ್ ಯಾತ್ರೆ ತುಮಕೂರು ಜಿಲ್ಲೆಗೆ ಆಗಮಿಸಲಿದ್ದು, ತಿಪಟೂರಿನಿಂದ 3,000 ಕಾರ್ಯಕರ್ತರು ಈ ಸಮಾವೇಶಕ್ಕೆ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್ ಮುಖಂಡ ಸಿ.ಬಿ.ಶಶಿಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಡೆನೂರು ಕಾಂತರಾಜ್, ನಗರಸಭೆ ಮಾಜಿ ಅಧ್ಯಕ್ಷ ಟಿ.ಎನ್.ಪ್ರಕಾಶ್, ತಾಲೂಕು ಮಾಜಿ ಅಧ್ಯಕ್ಷ ಸುರೇಶ್ ನಾ ಕೇನಳ್ಳಿ, ಮಹಿಳಾ ಘಟಕದ ಅಧ್ಯಕ್ಷ ನೂರು ಬಾನು ಸೈಫ್ ಉಲ್ಲಾ ಇತರರು ಉಪಸ್ಥಿತರಿದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy