ಬೆಂಗಳೂರು: ನಾಡ ಹಬ್ಬ ಮೈಸೂರು ದಸರಾವನ್ನು ಈ ಬಾರಿ ಅದ್ದೂರಿಯಾಗಿ ಆಚರಿಸಲು ನಿರ್ಧಾರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ.
ಇಂದು ಮೈಸೂರು ದಸರಾ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ದಸರಾ ಹಬ್ಬದ ಉದ್ಘಾಟಕರಾಗಿ ಯಾರನ್ನು ಆಹ್ವಾನ ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆದಿದೆ. ದಸರಾ ಆಚರಣೆಯ ಸಮಿತಿ, ದಸರಾ ಉದ್ಘಾಟನೆಗೆ ಆಹ್ವಾನಿತರ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದ್ದೇವೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ದಸರಾ ಬಗ್ಗೆ ಪ್ರಚಾರ ಮಾಡಲಾಗುವುದು. ದಸರಾ ಬ್ರ್ಯಾಂಡ್ ಆಗಬೇಕು ಎಂದರು.
ಸೆಪ್ಟೆಂಬರ್ 26 ರಿಂದ ನವರಾತ್ರಿ ಉತ್ಸವ ಆರಂಭವಾಗಲಿದೆ. ಅಕ್ಟೋಬರ್ 5 ರಂದು ಜಂಬೂಸವಾರಿ ಮೆರವಣಿಗೆ ನಡೆಯಲಿದೆ. ಈ ವಸ್ತು ಪ್ರದರ್ಶನ 15 ದಿನ ಮೊದಲೇ ಆರಂಭಿಸಲು ಸೂಚಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz