nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ

    November 23, 2025

    ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ

    November 23, 2025

    ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ

    November 23, 2025
    Facebook Twitter Instagram
    ಟ್ರೆಂಡಿಂಗ್
    • ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
    • ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ
    • ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
    • ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
    • ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
    • ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
    • ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
    • ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ: ನಾಡಪ್ರಭು ಕೆಂಪೇಗೌಡರ 514ನೇ ಜಯಂತ್ಯೋತ್ಸವ ಆಚರಣೆ: ಶಾಸಕ ಎಂ.ಟಿ.ಕೃಷ್ಣಪ್ಪ ಭಾಗಿ
    ತುರುವೇಕೆರೆ June 27, 2023

    ತುರುವೇಕೆರೆ: ನಾಡಪ್ರಭು ಕೆಂಪೇಗೌಡರ 514ನೇ ಜಯಂತ್ಯೋತ್ಸವ ಆಚರಣೆ: ಶಾಸಕ ಎಂ.ಟಿ.ಕೃಷ್ಣಪ್ಪ ಭಾಗಿ

    By adminJune 27, 2023No Comments2 Mins Read
    kempegowda

    ತುರುವೇಕೆರೆ: ನಾಡಪ್ರಭು ಕೆಂಪೇಗೌಡರ 514ನೇ ಜಯಂತ್ಯೋತ್ಸವವನ್ನು ತಾಲೂಕು ಒಕ್ಕಲಿಗರ ಸಂಘ ಮತ್ತು ತಾಲೂಕು ನೌಕರರ ಸಂಘ ಹಾಗೂ ಶ್ರೀ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗರ ಸಂಘ ಶ್ರೀ ಕೆಂಪೇಗೌಡ ಯುವ ಸೇನೆ ವತಿಯಿಂದ ಬಹಳ ಅದ್ದೂರಿಯಾಗಿ ಪಟ್ಟಣದಲ್ಲಿ ಆಚರಿಸಲಾಯಿತು.

    ಕಾರ್ಯಕ್ರಮದಲ್ಲಿ ಶಾಸಕ ಎಂ.ಟಿ.ಕೃಷ್ಣಪ್ಪನವರು ಮಾತನಾಡಿ, ನಾಡಪ್ರಭು ಕೆಂಪೇಗೌಡರ 514ನೇ ಜಯಂತಿಯನ್ನು ನಾವುಗಳೆಲ್ಲರೂ ಬಹಳ ಸಂಭ್ರಮದಿಂದ ಆಚರಿಸುತ್ತಿದ್ದೇವೆ . ಶ್ರೀ ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಲ್ಪತರು ಆಶೀರ್ವಾದ ಸ್ವಾಮೀಜಿಯವರಾದ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ನಮಗೆ ಆಶೀರ್ವಚನವನ್ನು ಮಾಡಿದ್ದಾರೆ ಎಂದರು.


    Provided by
    Provided by

    ಈ ಸಮಾರಂಭದ ಮುಖ್ಯ ಭಾಷಣಕಾರರಾಗಿ ಆಗಮಿಸಿ ಮಾತನಾಡಿದ ಪ್ರೊಫೆಸರ್ ಚಂದ್ರಶೇಖರ್ ರವರು  ಬಹಳ ಸೊಗಸಾಗಿ ಕೆಂಪೇಗೌಡರ ಬಗ್ಗೆ ಸವಿಸ್ತಾರವಾಗಿ ತಿಳಿಸಿಕೊಟ್ಟಿದ್ದಾರೆ ಅವರಿಗೆ ನನ್ನ ಕೃತಜ್ಞತೆಗಳು ಪ್ರೊಫೆಸರ್ ಪುಟ್ಟರಂಗಪ್ಪನವರು ಚಂದ್ರಶೇಖರ್ ಅವರ ಹೆಸರನ್ನು ಶಿಫಾರಸು ಮಾಡಿ ಬಹಳ ಒಳ್ಳೆಯ ಕೆಲಸವನ್ನು ಮಾಡಿದ್ದಾರೆ ಅವರಿಗೆ ಧನ್ಯವಾದಗಳು ಎಂದು ನುಡಿದರು.

    ನಿರೀಕ್ಷಿತ ಮಟ್ಟದಲ್ಲಿ ಜನ ಸೇರದ್ದಕ್ಕೆ ಬಹಳ ನಿರಾಸೆಯಾಗಿದೆ ನಮ್ಮಗಳಿಗೆ ಇಂತಹ ವಿಚಾರದಲ್ಲಿ ಆಸಕ್ತಿ ಕಡಿಮೆಯಾಗಿರುವುದೇ ಇದಕ್ಕೆ ಸಾಕ್ಷಿ.  ಕಳೆದ ಬಾರಿ ಹೆಚ್ಚು ಜನಗಳನ್ನು ಸೇರಿಸಿ ಜಯಂತಿಯನ್ನು ಆಚರಿಸಿದ್ದೆವು ಆದರೆ ಈ ಬಾರಿ ಕೆಲಸದ ಒತ್ತಡದಿಂದ ಜನರನ್ನು ಸೇರಿಸಲು ಆಗಲಿಲ್ಲ ಅದಕ್ಕೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ  ಎಂದರು.

    ಮುಂದಿನ ದಿನಗಳಲ್ಲಿ ನಿರೀಕ್ಷೆಗೂ ಮೀರಿ ಜಯಂತಿಯನ್ನು ಆಚರಿಸೋಣ ಎಂದು ಕರೆಕೊಟ್ಟು ಜನಗಳು ತಮ್ಮ ತಮ್ಮ ಜವಾಬ್ದಾರಿಗಳನ್ನು ಏನೆಂಬುದನ್ನು ತಿಳಿದುಕೊಳ್ಳಬೇಕಾಗಿದೆ ಅವರೇ ಅರಿತುಕೊಳ್ಳಬೇಕು  ಎಂದರು.

    ಇನ್ನು ಈ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯದರ್ಶಿ ಗಳು ಹಾಗೂ ಮಾಯಸಂದ್ರ ಕಲ್ಪತರು ಆಶ್ರಮದ ಶ್ರೀಗಳಾದ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರು  ಆಶೀರ್ವಚನ ನೀಡಿದರು.

    ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಪ್ರವಾಸಿ ಮಂದಿರ ಬಳಿಯಿಂದ ನೂರಾರು ಸಂಖ್ಯೆಯ ಸಂಘಟಕರು ಹಾಗೂ ಸಾರ್ವಜನಿಕರು ಕೆಂಪೇಗೌಡರ ಭಾವಚಿತ್ರವನ್ನೆರಿಸಿದ ರಥದಲ್ಲಿ ಮೆರವಣಿಗೆ ಮೂಲಕ ಹಿರಣ್ಣಯ್ಯ ಬಯಲು ರಂಗ ಮಂದಿರದಲ್ಲಿ ಸಿದ್ಧವಾಗಿದ್ದ ವೇದಿಕೆಯ ಬಳಿ ಕಲಾತಂಡಗಳೊಂದಿಗೆ ಕರೆತರಲಾಯಿತು.

    ಈ ಮೆರವಣಿಗೆಯಲ್ಲಿ ವ್ಯಕ್ತಿಯೋರ್ವ ಕೆಂಪೇಗೌಡರ ಪೋಷಕನ್ನು ಹಾಕಿ ಕುದುರೆ ಮೇಲೆ ಕುಳಿತು ಬಂದ ದೃಶ್ಯವೂ ಆಕರ್ಷಣೀಯವಾಗಿತ್ತು  ಬೃಹತ್ ಕಾರ್ಯಕ್ರಮದ ವೇದಿಕೆಯಲ್ಲಿ ಕೈಗಾರಿಕೋದ್ಯಮಿ ಎನ್ ಕೆಂಪಯ್ಯ ಹಾಗೂ ಕಳೆದ ಮೇ ತಿಂಗಳಲ್ಲಿ  ಮಲೇಷ್ಯಾದಲ್ಲಿ ನಡೆದ ಅಂತರರಾಷ್ಟ್ರೀಯ ಡಾಡ್ಜ್ ಬಾಲ್ ಪಂದ್ಯಾವಳಿಯಲ್ಲಿ ತರಬೇತುದಾರರಾಗಿ ಭಾಗವಹಿಸಿದ್ದ ಎಸ್ ಬಿ ಜಿ ಶಾಲೆಯ ದೈಹಿಕ ಶಿಕ್ಷಕ ಉದಯ್ ಕುಮಾರ್ ಸಿಪಿ ಮತ್ತು ಇದೇ ಪಂದ್ಯಾವಳಿಯಲ್ಲಿ ಸ್ವರ್ಣ ಪದಕ ಗೆದ್ದ ಕುಮಾರಿ ಮಾನಸ ಜಿ ಕುಮಾರಿ ವೇದಾವತಿ ರವರನ್ನು ಸನ್ಮಾನಿಸಿ ತಾಲೂಕು ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಲಾಯಿತು.
    ಕಾರ್ಯಕ್ರಮದಲ್ಲಿ ತಾಲೂಕು ತಹಶೀಲ್ದಾರ್ ವೈ ಎಂ ರೇಣು ಕುಮಾರ್, ಒಕ್ಕಲಿಗ ಸಂಘದ ತಾಲೂಕು ಅಧ್ಯಕ್ಷರಾದ ಪಿ.ಎಚ್.ಧನಪಾಲ್, ಆರ್.ಹನುಮಂತ ರಾಯಪ್ಪ, ತಾಲೂಕು ಒಕ್ಕಲಿಗ ನೌಕರರ ಸಂಘದ ಅಧ್ಯಕ್ಷ ಡಾ.ನವೀನ್, ಮಹಿಳಾ ತಾಲೂಕು ಅಧ್ಯಕ್ಷ ವಿಜಯಲಕ್ಷ್ಮೀ, ಎಐಸಿಸಿ ಸದಸ್ಯ ಸುಬ್ರಹ್ಮಣ್ಯ ಶ್ರೀಕಂಠೇಗೌಡ , ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಡಿಪಿ ರಾಜು, ತಾಲೂಕು ನೌಕರರ ಸಂಘದ ಅಧ್ಯಕ್ಷ ನಂ.ರಾಜು , ಎನ್.ಆರ್.ಜಯರಾಮ್ , ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಬಿ.ಎಸ್.ದೇವರಾಜ್ , ಅಬುಕನಹಳ್ಳಿ ರಂಗನಾಥ್, ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ರಮೇಶ್ ಗೌಡ ಮುತ್ತುಗದ ಹಳ್ಳಿ ಕೆಂಪರಾಜು ಚಂದ್ರೇಗೌಡ ಸೇರಿದಂತೆ ಇತರರು ಇದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಏತ ನೀರಾವರಿ ಯೋಜನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿ: ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯ

    November 20, 2025

    ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ

    November 18, 2025

    ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್

    October 26, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ

    November 23, 2025

    ತುಮಕೂರು: ನಗರದ ಸರಸ್ವತಿಪುರಂನಲ್ಲಿ ನಿರ್ಮಾಣಗೊಂಡಿರುವ ಸುಸಜ್ಜಿತ ಜಿಲ್ಲಾ ಬಂಜಾರ ಭವನದ ಉದ್ಘಾಟನೆಯನ್ನು ಡಿಸೆಂಬರ್ 14ರಂದು  ನೆರವೇರಿಸಲಿದ್ದು, ಗೃಹ ಹಾಗೂ ಜಿಲ್ಲಾ…

    ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ

    November 23, 2025

    ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ

    November 23, 2025

    ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ

    November 23, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.