ಮಹಾರಾಷ್ಟ್ರ: ಇಬ್ಬರು ಹೆಣ್ಣು ಮಕ್ಕಳೊಂದಿಗೆ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಮಹಾರಾಷ್ಟ್ರದ ಭಂಡಾರ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ದೀಪಾಲಿ ಶೀತಲ್ ಖಂಗರ್ (28) ಮತ್ತು ಮೂರು ಹಾಗೂ ಎರಡು ವರ್ಷದ ಹೆಣ್ಣುಮಕ್ಕಳು ಎಂದು ಗುರುತಿಸಲಾಗಿದೆ. ಇವರು ಭಂಡಾರ ತಾಲೂಕಿನ ತಿದ್ದಿ ಗ್ರಾಮದ ನಿವಾಸಿಗಳು ಎಂದು ಗೊತ್ತಾಗಿದೆ.
ಮಧ್ಯರಾತ್ರಿ 12 ಗಂಟೆ ಸುಮಾರಿಗೆ ದೀಪಾಲಿ ತಮ್ಮ ಇಬ್ಬರು ಮಕ್ಕಳೊಂದಿಗೆ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ನದಿಯಲ್ಲಿ ಶವಗಳು ತೇಲಿಬಂದಿದ್ದು, ಆಗ ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy