nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026

    ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ

    July 14, 2026

    ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ

    July 14, 2026
    Facebook Twitter Instagram
    ಟ್ರೆಂಡಿಂಗ್
    • ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
    • ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
    • ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
    • ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
    • ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ
    • ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ
    • ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
    • ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕವಿ ನಾಡೋಜ ಡಾ.ಚನ್ನವೀರ ಕಣವಿ ಅವರ ಬಗ್ಗೆ ನಿಮಗೆಷ್ಟು ಗೊತ್ತು?
    ಸ್ಪೆಷಲ್ ನ್ಯೂಸ್ February 16, 2022

    ಕವಿ ನಾಡೋಜ ಡಾ.ಚನ್ನವೀರ ಕಣವಿ ಅವರ ಬಗ್ಗೆ ನಿಮಗೆಷ್ಟು ಗೊತ್ತು?

    By adminFebruary 16, 2022No Comments2 Mins Read
    kanavi

    ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ ಚಂಬೆಳಕಿನ ಕವಿ ನಾಡೋಜ ಡಾ.ಚನ್ನವೀರ ಕಣವಿ(93) ವಿಧಿವಶರಾಗಿದ್ದಾರೆ.

    ಕೋವಿಡ್ ಸೋಂಕಿನಿಂದ ಸಂಪೂರ್ಣ ಚೇತರಿಕೆ ಕಂಡಿದ್ದ ಕಣವಿ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಜ.14ರಂದು ಎಸ್‍ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ.

    ಕಣವಿ ಅವರ ಅಂತ್ಯಕ್ರಿಯೆ ಸೃಷ್ಟಿ ಫಾರ್ಮ್‍ಹೌಸ್‍ನಲ್ಲಿ ಇಂದು ಸಂಜೆ ನೆರವೇರಲಿದೆ. ಇದಕ್ಕೂ ಮುನ್ನ ಕರ್ನಾಟಕದ ಕಲಾ ಮಹಾವಿದ್ಯಾಲಯದಲ್ಲಿ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಇಲ್ಲಿಗೆ ಆಗಮಿಸಿದ ಬಂಧುಮಿತ್ರರು, ಸಾಹಿತ್ಯ ಬಳಗ, ರಾಜಕಾರಣಿಗಳು, ಬರಹಗಾರರು, ವಿದ್ಯಾರ್ಥಿಗಳು ಅಂತಿಮ ದರ್ಶನ ಪಡೆದು ಕಣವಿ ಅವರ ಆತ್ಮಕ್ಕೆ ಶಾಂತಿ ಕೋರಿದರು.ಕಣವಿ ನಡೆದು ಬಂದ ದಾರಿ:

    ಜೂನ್ 28, 1928ರಂದು ಧಾರವಾಡ ಜಿಲ್ಲೆಯ ಹೊಂಬಳದಲ್ಲಿ ಚನ್ನವೀರ ಕಣವಿ ಜನಿಸಿದರು. ಶಿರುಂಡ, ಗರಗಗಳಲ್ಲಿ 1940-46ರಲ್ಲಿ ಪ್ರಾಥಮಿಕ ಅಭ್ಯಾಸ ಮುಗಿಸಿದ ಮೇಲೆ ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ 1950ರಲ್ಲಿ ಬಿ.ಎ ಪದವಿ, 1952ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ ಪದವಿಯನ್ನೂ ಗಳಿಸಿದರು.

    1952ರಲ್ಲಿ ಕರ್ನಾಟಕದ ವಿಶ್ವವಿದ್ಯಾನಿಲಯದ ಪ್ರಸಾರಾಂಗದಲ್ಲಿ ಕಾರ್ಯದರ್ಶಿಯಾಗಿ ಸೇವೆ ಪ್ರಾರಂಭಿಸಿದ ಕಣವಿ ಅವರು ಅನಂತರ 1958ರಲ್ಲಿ ಅದರ ನಿರ್ದೇಶಕರಾದರು.ಹಲವಾರು ಪ್ರಶಸ್ತಿಗಳು ಕಣವಿ ಅವರ ಸಾಹಿತ್ಯ ಸಾಧನೆಗಾಗಿ ಬಂದಿವೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ(1981), ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ(1985), ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ(1989), ಭಾರತ ಸರಕಾರದ ಮಾನವ ಸಂಪನ್ಮೂಲ ಇಲಾಖೆಯ ಸಂಸ್ಕೃತಿ ವಿಭಾಗದ ಎಮರಿಟಿಸ್ ಫೆಲೋಷಿಪ್(1996-98), ಪಂಪ ಪ್ರಶಸ್ತಿ(1999), ಅನಕೃ ಪ್ರತಿಷ್ಠಾನ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯ ನಾಡೋಜ ಪ್ರಶಸ್ತಿ, ಕರ್ನಾಟಕ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಿದೆ.

    1996ರಲ್ಲಿ 65ನೇ ಕನ್ನಡ ಸಾಹಿತ್ಯ ಸಮ್ಮೇಳನ ಹಾಸನದಲ್ಲಿ ಜರುಗಿದಾಗ ಕಣವಿ ಅವರು ಸಮ್ಮೇಳನಾಧ್ಯಕ್ಷರಾಗಿದ್ದರು. ಕಣವಿ ಅವರು ಕವಿತೆ, ವಿಮರ್ಶೆ ಕ್ಷೇತ್ರಗಳಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಕನ್ನಡ ನಾಡಿನ ಚಳವಳಿಗಳಲ್ಲಿ ಭಾಗವಹಿಸಿದ್ದಾರೆ. ಕಣವಿ ಅವರ ಕಾವ್ಯಸಂಕಲನಗಳಲ್ಲಿ ಕಾವ್ಯಾಕ್ಷಿ, ಭಾವಜೀವಿ, ಆಕಾಶಬುಟ್ಟಿ, ದೀಪಧಾರಿ, ಮೆರವಣಿಗೆ, ಜೀವಧ್ವನಿ, ನಗರದಲ್ಲಿ ನೆರಳು, ಚಿರಂತನದಾಸ ಪ್ರಸಿದ್ಧವಾಗಿವೆ. ಸಾಹಿತ್ಯ ಚಿಂತನ, ಕಾವ್ಯಾನುಸಂಧಾನ, ಸಮಾಹಿತ, ಸಮತೋಲನ ಇತ್ಯಾದಿ ವಿಮರ್ಶಾ ಗ್ರಂಥಗಳು ಜನಪ್ರಿಯವಾಗಿವೆ.

    ಧಾರವಾಡದ ಕಲ್ಯಾಣ ನಗರದ ಚೆಂಬೆಳಕು ನಿವಾಸದಲ್ಲಿ ಕಣವಿ ಅವರು ನಿವೃತ್ತಜೀವನ ನಡೆಸುತಿದ್ದ ಅವರು, ಸಾಹಿತ್ಯಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದರು. ಭಾವಜೀವಿ, ಸಮನ್ವಯ ಕವಿ ಎಂದೇ ಅವರು ಖ್ಯಾತಿಗಳಿಸಿದ್ದರು.ಸಂತಾಪ: ಕಣವಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ.ಪಾಟೀಲ್, ಕೆ.ಗೋಪಾಲಯ್ಯ, ಮುರುಗೇಶ್ ನಿರಾಣಿ, ಮಾಜಿ ಸಚಿವ ವಿನಯ್‍ಕುಮಾರ್ ಕುಲಕರ್ಣಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ರಾಜಕೀಯ ಗಣ್ಯರು, ಸಾಹಿತಿಗಳು ಸಂತಾಪ ಸೂಚಿಸಿದ್ದಾರೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


    Provided by
    Provided by
    admin
    • Website

    Related Posts

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ “ಶ್ರೀಮತಿ ಸಿಂಧೂರ” ಆಡಿಯೋ ಟೀಸರ್ ರಿಲೀಸ್

    May 2, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026

    ತುಮಕೂರು: ವಿಶ್ವವಿದ್ಯಾನಿಲಯಗಳು ಸಂಖ್ಯೆಯಲ್ಲಿ ವಿಸ್ತರಣೆಯಾಗದೆ ಗುಣಮಟ್ಟದಲ್ಲಿ ಬೆಳೆಯಬೇಕಿದೆ. ಈ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಸಂಬಂಧ ಯುಜಿಸಿ ಗಮನಹರಿಸಬೇಕಿದೆ…

    ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ

    July 14, 2026

    ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ

    July 14, 2026

    ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್

    July 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.