ತುಮಕೂರು: ಶ್ರೀ ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ವತಿಯಿಂದ ಕೊಡಲಾಗುವ 2024ನೇ ಸಾಲಿನ ಪ್ರತಿಷ್ಠಿತ ‘ಸಿದ್ಧಗಂಗಾಶ್ರೀ’ ಪ್ರಶಸ್ತಿಗೆ ನಾಡೋಜ ಡಾ. ಗೊ.ರು. ಚನ್ನಬಸಪ್ಪನವರಿಗೆ ‘ಸಿದ್ಧಗಂಗಾಶ್ರೀ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಘದ ಕಾರ್ಯದರ್ಶಿ ಕೆ.ಹೆಚ್. ಶಿವರುದ್ರಯ್ಯ ತಿಳಿಸಿದ್ದಾರೆ.
ಶ್ರೀ ಸಿದ್ಧಗಂಗಾಮಠದಲ್ಲಿ ಜ.21ರಂದು ನಡೆಯಲಿರುವ ಡಾ.ಶ್ರೀಶಿವಕುಮಾರ ಮಹಾಸ್ವಾಮೀಜಿಗಳ 6ನೇ ವರ್ಷದ ಪುಣ್ಯಸ್ಮರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು 1 ಲಕ್ಷ ನಗದು, ಅಭಿನಂದನಾ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx