nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಶಾ ಮುಕ್ತ ಭಾರತಕ್ಕೆ ತುಮಕೂರಿನಲ್ಲಿ ಚಾಲನೆ: ಯುವಜನತೆಗೆ ದೈಹಿಕ ಸ್ವಾಸ್ಥ್ಯದ ಕರೆ ನೀಡಿದ ಸಚಿವ ವಿ.ಸೋಮಣ್ಣ

    April 25, 2026

    ಮೊಬೈಲ್  ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ

    April 25, 2026

    ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ

    April 25, 2026
    Facebook Twitter Instagram
    ಟ್ರೆಂಡಿಂಗ್
    • ನಶಾ ಮುಕ್ತ ಭಾರತಕ್ಕೆ ತುಮಕೂರಿನಲ್ಲಿ ಚಾಲನೆ: ಯುವಜನತೆಗೆ ದೈಹಿಕ ಸ್ವಾಸ್ಥ್ಯದ ಕರೆ ನೀಡಿದ ಸಚಿವ ವಿ.ಸೋಮಣ್ಣ
    • ಮೊಬೈಲ್  ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ
    • ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ
    • ವರನಟ ಡಾ. ರಾಜ್‌ಕುಮಾರ್ ಸಮಾಧಿ ಬಗ್ಗೆ ಹೇಳಿಕೆ: ನಟ ಚೇತನ್ ವಿರುದ್ಧ ಪೊಲೀಸ್ ದೂರು
    • ಡಾ.ಬಿ.ಆರ್.ಅಂಬೇಡ್ಕರ್ ವಿಶ್ವಕ್ಕೆ ಮಾರ್ಗದರ್ಶಕರು: ಡಾ.ಅಶ್ವಿನಿ ಕೆ.ಪಿ.
    • ಮಾಜಿ ಶಾಸಕ ರಫೀಕ್ ಅಹಮದ್ ಅವರ ತಾಯಿ ನಿಧನ: ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದ ಸಚಿವ ಜಿ.ಪರಮೇಶ್ವರ್
    • ಅಂಬೇಡ್ಕರ್ ರವರ ಚಿಂತನೆಗಳು ಸರ್ವಕಾಲಿಕ ಪ್ರಸ್ತುತ: ಚಾಮರಾಜನಗರ ವಿವಿಯ ಕುಲಪತಿ ಪ್ರೊ. ಬಿ.ಎಲ್. ಗಂಗಾಧರ್ ಅಭಿಮತ
    • ತುಮಕೂರಿನಲ್ಲಿ 24ನೇ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ ಹಬ್ಬ: ಅಂತರಾಷ್ಟ್ರೀಯ ಮಟ್ಟಕ್ಕೆ ಲಗ್ಗೆ ಇಡಲು ಸಜ್ಜಾದ ಕಲ್ಪತರು ನಾಡು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡ ನಾಡು-ನುಡಿ ಪರಂಪರೆಯ ಉಳಿವಿಗೆ ಅಗತ್ಯವಾದ ಎಲ್ಲಾ ಯೋಜನೆಗಳ ಅನುಷ್ಠಾನ: ಸಚಿವ ಶಿವರಾಜ್ ಎಸ್. ತಂಗಡಗಿ
    ರಾಜ್ಯ ಸುದ್ದಿ June 2, 2023

    ಕನ್ನಡ ನಾಡು-ನುಡಿ ಪರಂಪರೆಯ ಉಳಿವಿಗೆ ಅಗತ್ಯವಾದ ಎಲ್ಲಾ ಯೋಜನೆಗಳ ಅನುಷ್ಠಾನ: ಸಚಿವ ಶಿವರಾಜ್ ಎಸ್. ತಂಗಡಗಿ

    By adminJune 2, 2023No Comments2 Mins Read
    thangadagi

    ಬೆಂಗಳೂರು: ಕನ್ನಡ ಭಾಷೆಯ ಅಸ್ಮಿತೆಯನ್ನು ಕಾಪಾಡಲು ಹಾಗೂ ಕನ್ನಡ ನಾಡು-ನುಡಿ-ಪರಂಪರೆಯ ಉಳಿವಿಗೆ ಅಗತ್ಯವಾದ ಎಲ್ಲಾ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳು ಪ್ರಾಮಾಣಿಕವಾದ ಪ್ರಯತ್ನ ಮಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಸಚಿವ ಶಿವರಾಜ್ ಎಸ್. ತಂಗಡಗಿ ಹೇಳಿದ್ದಾರೆ.

    ಅವರು ಇಂದು ಕನ್ನಡ ಭವನದಲ್ಲಿರುವ ಅಂತರಂಗ ಸಭಾ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರ ವ್ಯಾಪ್ತಿಗೆ ಬರುವ ಇಲಾಖೆಗಳ ಮುಖ್ಯಸ್ಥರ ಹಾಗೂ ಅಧಿಕಾರಿಗಳ ಸಭೆ ನಡೆಸಿ ಇಲಾಖೆ ಹಾಗೂ ವಿವಿಧ ಅಕಾಡೆಮಿ ಮತ್ತು ಪ್ರಾಧಿಕಾರಗಳು ಅನುಷ್ಠಾನಗೊಳಿಸುತ್ತಿರುವ ಯೋಜನೆಗಳ ಬಗ್ಗೆ ಮಾಹಿತಿ ಪಡೆದರು.


    Provided by
    Provided by

    ಈ ಸಂದರ್ಭದಲ್ಲಿ ಮಾತನಾಡಿದ ಅವರು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಇತ್ತೀಚೆಗೆ ವಿಧಾನಮಂಡಲದಲ್ಲಿ ಅನುಮೋದನೆಗೊಂಡ ವಿಧೇಯಕಕ್ಕೆ ಸಂಬಂಧಿಸಿದಂತೆ ಕಾಯ್ದೆ ಹಾಗೂ ನಿಯಮಗಳನ್ನು ರೂಪಿಸುವ ಕೆಲಸಕ್ಕೆ ವೇಗ ನೀಡಬೇಕೆಂದು ಸೂಚಿಸಿದರು. ಕಾಲಮಿತಿಯಲ್ಲಿ ಕಾಯ್ದೆಗಳು ರೂಪುಗೊಳ್ಳಬೇಕೆಂದು ತಿಳಿಸಿದರು. ಜಿಲ್ಲಾ ಮಟ್ಟದಲ್ಲಿ ಆಯೋಜಿಸುತ್ತಿರುವ ವಿವಿಧ ಉತ್ಸವಗಳನ್ನು ಇನ್ನೂ ಹೆಚ್ಚು ಆಕರ್ಷಣೀಯವಾಗಿ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯುವಂತೆ ಆಯೋಜಿಸಲು ರೂಪುರೇಷೆ ಸಿದ್ಧಪಡಿಸಬೇಕೆಂದು ಹೇಳಿದರು. ಪ್ರತೀ ಜಿಲ್ಲೆಯ ಜೀವಂತಿಕೆ ಉಳಿಸುವಂತಹ ಕಾರ್ಯಕ್ರಮವಾಗಬೇಕು. ಅದಕ್ಕೆ ಪೂರಕವಾಗಿ ಪ್ರವಾಸೋದ್ಯಮ ಇಲಾಖೆಯ ಸಹಯೋಗವನ್ನು ಪಡೆಯುವುದರ ಮೂಲಕ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಚಟುವಟಿಕೆಯನ್ನು ಹೆಚ್ಚಿಸಬಹುದೆಂದು ಸಲಹೆ ನೀಡಿದರು.

    ಖಾಸಗೀ ಸಂಸ್ಥೆಗಳಲ್ಲಿ ಹಾಗೂ ಖಾಸಗೀ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡವನ್ನು ಬಳಸುವುದರ ಬಗ್ಗೆ ಸಂಬಂಧಪಟ್ಟ ಪ್ರಾಧಿಕಾರ ಮತ್ತು ಇಲಾಖೆಗಳು ಪರಿಶೀಲನೆ ನಡೆಸಬೇಕು. ಕನ್ನಡಿಗರಿಗೆ ಉದ್ಯೋಗವಕಾಶವನ್ನು ದೊರಕಿಸಬೇಕಾದ ನಿಟ್ಟಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹೆಚ್ಚು ಶ್ರಮ ವಹಿಸಬೇಕು. ಅದಕ್ಕೆ ಸರ್ಕಾರದಿಂದ ಬೇಕಾದ ಕಾನೂನಾತ್ಮಕ ನೆರವನ್ನು ಒದಗಿಸಲು ಶೀಘ್ರದಲ್ಲಿ ಸಂಬಂಧಪಟ್ಟವರ ಸಭೆ ಕರೆಯಲಾಗುವುದೆಂದು ಹೇಳಿದರು.

    ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ತುಂಬಲು ಕ್ರಮವಹಿಸಲಾಗುವುದು. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಹೆಚ್ಚಿನ ಬದ್ಧತೆಯಿಂದ ಕೆಲಸ ಮಾಡಬೇಕಿದೆ. ಇಲಾಖೆಯ ಎಲ್ಲ ಯೋಜನೆಗಳನ್ನು ಕಾಲಮಿತಿಯೊಳಗೆ ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳ ಪಾತ್ರಮಹತ್ವದ್ದು, ಇದರಲ್ಲಿ ಯಾವುದೇ ಲೋಪವಾದರೂ ಅದನ್ನು ತಾವು ಸಹಿಸುವುದಿಲ್ಲವೆಂದು ಅವರು ಎಚ್ಚರಿಕೆ ನೀಡಿದರು.

    ಹಾರ ತುರಾಯಿ ಬದಲು ಪುಸ್ತಕ ನೀಡಿ ತಮ್ಮನ್ನು ಭೇಟಿ ಮಾಡಲು ಬರುವ ಯಾರೇ ಆದರೂ ಹಾರ ತುರಾಯಿ, ಶಾಲು, ಪೇಟ ಇತ್ಯಾದಿಗಳಿಂದ ಸನ್ಮಾನ ಮಾಡುವುದನ್ನು ನಾನು ಬಯಸುವುದಿಲ್ಲ .ಅದರ ಬದಲಾಗಿ ಒಂದು ಒಳ್ಳೆಯ ಸಾಹಿತ್ಯ ಕೃತಿಯನ್ನು ಕೊಟ್ಟರೆ ಅದು ನನಗೆ ನೀಡಬಹುದಾದ ಉತ್ತಮ ಕೊಡುಗೆಯಾಗುತ್ತದೆ . ಇದರಿಂದ ಪುಸ್ತಕ ಪ್ರಕಾಶಕರಿಗೆ, ಮಾರಾಟಗಾರರಿಗೆ ಹಾಗೂ ಸಾಹಿತಿಗಳಿಗೆ ನೆರವಾಗುವುದಲ್ಲದೆ ಪುಸ್ತಕಕೋದ್ಯಮದ ಬೆಳವಣಿಗೆಗೂ ಅನುಕೂಲವಾಗುತ್ತದೆ. ಈ ರೀತಿ ನನಗೆ ನೀಡಲಾಗುವ ಎಲ್ಲಾ ಪುಸ್ತಕಗಳನ್ನು ಸಂಗ್ರಹಿಸಿ ಓದುವ ಆಸಕ್ತಿ ಉಳ್ಳ ಮಕ್ಕಳಿಗೆ ಅದನ್ನು ನೀಡಲು ಬಯಸುತ್ತೇನೆ .ಅಥವಾ ಆಸಕ್ತ ಶಾಲಾ, ಕಾಲೇಜಿನ ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡುತ್ತೇನೆ ಎಂದು ಸಚಿವರು ಹೇಳಿದರು.

    ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗಳಾದ ಡಾ. ಎನ್. ಮಂಜುಳಾ, ಎಲಾಖೆಯ ನಿರ್ದೇಶಕರಾದ  ವಿಶ್ವನಾಥ ಪಿ. ಹಿರೇಮಠ ಸೇರಿದಂತೆ ವಿವಿಧ ಪ್ರಾಧಿಕಾರಗಳ ಹಾಗೂ ಅಕಾಡೆಮಿಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಮೊಬೈಲ್  ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ

    April 25, 2026

    ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ

    April 25, 2026

    ವರನಟ ಡಾ. ರಾಜ್‌ಕುಮಾರ್ ಸಮಾಧಿ ಬಗ್ಗೆ ಹೇಳಿಕೆ: ನಟ ಚೇತನ್ ವಿರುದ್ಧ ಪೊಲೀಸ್ ದೂರು

    April 25, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನಶಾ ಮುಕ್ತ ಭಾರತಕ್ಕೆ ತುಮಕೂರಿನಲ್ಲಿ ಚಾಲನೆ: ಯುವಜನತೆಗೆ ದೈಹಿಕ ಸ್ವಾಸ್ಥ್ಯದ ಕರೆ ನೀಡಿದ ಸಚಿವ ವಿ.ಸೋಮಣ್ಣ

    April 25, 2026

    ತುಮಕೂರು: ದೇಶದ ಭವಿಷ್ಯವಾಗಿರುವ ಯುವ ಸಮುದಾಯ ಮಾದಕ ವ್ಯಸನಗಳಿಂದ ದೂರವಿದ್ದು, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕೇಂದ್ರ ಸಚಿವ…

    ಮೊಬೈಲ್  ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ

    April 25, 2026

    ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ

    April 25, 2026

    ವರನಟ ಡಾ. ರಾಜ್‌ಕುಮಾರ್ ಸಮಾಧಿ ಬಗ್ಗೆ ಹೇಳಿಕೆ: ನಟ ಚೇತನ್ ವಿರುದ್ಧ ಪೊಲೀಸ್ ದೂರು

    April 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.