ಶಿವಮೊಗ್ಗ: ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಕೋಟೆಯಾಗಿರುವ ಹಾಸನ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಆಗಲಿದ್ದಾರೆ ಎಂಬ ಕುತೂಹಲ ಮನೆ ಮಾಡಿದ್ದು ಹೆಚ್ ಡಿ ಕುಮಾರಸ್ವಾಮಿ ಅವರು ಅಭ್ಯರ್ಥಿ ಯಾರು ಎಂದು ಸ್ಪಷ್ಟನೆ ನೀಡದೆ ನಡುಗೋಡೆಯ ಮೇಲೆ ದೀಪವಿಡುವ ಕೆಲಸ ಮಾಡಿದ್ದಾರೆ.
ಹಾಸನ ಕ್ಷೇತ್ರಕ್ಕೆ ತಮ್ಮ ಅಭ್ಯರ್ಥಿ ಯಾರು ಎಂದು ಮಾದ್ಯಮದವರು ಕೇಳಿದ ಪ್ರಶ್ನೆಗೆ ಉತ್ತರ ನೀಡದೇ ಜಾರಿಕೊಂಡಿದ್ದು ಯಾರಿಗೆ ಟಿಕೇಟ್ ಸಿಗಲಿದೆ ಎಂಬಗೊಂದಲ ಮತ್ತಷ್ಟು ಹೆಚ್ಚುವಂತೆ ಮಾಡಿದ್ದಾರೆ.
ಪಕ್ಷದ ವರಿಷ್ಠರೆಲ್ಲ ಕೂತು ಒಂದು ನಿರ್ಣಯ ತೆಗೆದುಕೊಳ್ಳುತ್ತೇವೆ, ಅಭ್ಯರ್ಥಿಯ ಆಯ್ಕೆ ಪಕ್ಷದ ಮೇಲೆ ಯಾವುದೇ ಅಡ್ಡ ಪರಿಣಾಮ ಬೀರಬಾರದು, ಕಳೆದ ಎರಡೂವರೆ ತಿಂಗಳಿಂದ ತಾನು ಜೆಡಿಎಸ್ ಪಕ್ಷಕ್ಕೆ ಕನಿಷ್ಟ 125 ಸೀಟು ಬರುವಂತಾಗಲು ರಾಜ್ಯಾದಂತ ಓಡಾಡುತ್ತಿರಿವುದರಿಂದ ತನ್ನ ಶ್ರಮ ವ್ಯರ್ಥವಾಗಬಾರದು ಎಂದು ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy