ಪಾವಗಡ ಶಾಸಕರಾದ ಹೆಚ್.ವಿ. ವೆಂಕಟೇಶ್ ರವರು ನಾಗಲಮಡಿಕೆ ಅಂತ್ಯ ಸುಬ್ರಮಣ್ಯ ದೇಗುಲಕ್ಕೆ ಭೇಟಿ ನೀಡಿ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ತಾಲ್ಲೂಕಿನ ಜನತೆಗೆ ಒಳಿತಾಗಲೆಂದು ದೇವರಲ್ಲಿ ಪ್ರಾರ್ಥಿಸಿದರು.
ತದನಂತರ ತೇರು ಎಳೆಯುವ ಮೂಲಕ ಶ್ರೀ ಕ್ಷೇತ್ರ ನಾಗಲಮಡಿಕೆ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು.
ನನ್ನ ಅವಧಿಯಲ್ಲಿ ದೇವಸ್ಥಾನದ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡಲಾಗುವುದೆಂದು ಇದೇ ಸಂದರ್ಭದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಈ ಭಾಗದ ಹಲವು ಪ್ರಮುಖ ಮುಖಂಡರು ಮತ್ತು ಗ್ರಾಮಸ್ಥರು ಶಾಸಕರ ಜೊತೆಯಲ್ಲಿದ್ದರು.
ವರದಿ: ರಾಮಪ್ಪ ಸಿ.ಕೆ. ಪುರ, ಪಾವಗಡ


