ವಿಜಯಪುರ: ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಬೆಳಿಗ್ಗೆಯಿಂದ ಗುಡುಗು, ಸಿಡಿಲಿನೊಂದಿಗೆ ಬಿಟ್ಟು ಬಿಡದೆ ಬಿರುಸಿನ ಮಳೆಯಾಗುತ್ತಿದೆ.
ಚರಂಡಿಗಳು ಉಕ್ಕಿ ರಸ್ತೆ ಮೇಲೆ ನೀರು ಹರಿಯುತ್ತಿದೆ. ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಜನ, ವಾಹನ ಸಂಚಾರಕ್ಕೆ ಅಡಚಣೆ ಆಗಿದೆ.
ಕರಿ ಮೋಡಗಳು ದಟ್ಟೈಸಿದ್ದು, ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಬಿಸಿಲನಾಡು ವಿಜಯಪುರದಲ್ಲಿ ಮಲೆನಾಡಿನ ವಾತಾವರಣ ಸೃಷ್ಟಿಯಾಗಿದೆ. ಶಾಲೆ, ಕಾಲೇಜು, ಕಚೇರಿಗೆ ತೆರಳಲು ಮಕ್ಕಳು, ಶಿಕ್ಷಕರು, ನೌಕರರು ಪರದಾಡಿದರು.
ಪಂಚಮಿ ಹಬ್ಬದ ಪ್ರಯುಕ್ತ ನಾಗರಕಟ್ಟೆಗೆ ಹಾಲೆರೆದು ಪೂಜೆ ಸಲ್ಲಿಸಲು ಮಹಿಳೆಯರು ತೆರಳಲಾಗದಷ್ಟು ಮಳೆ ಸುರಿಯುತ್ತಿದೆ. ಹೀಗಾಗಿ ಜನರು ಮನೆಯಲ್ಲೇ ನಾಗರ ಪಂಚಮಿ ಆಚರಿಸುತ್ತಿದ್ದಾರೆ. ಹಬ್ಬದ ಸಂಭ್ರಮಕ್ಕೆ ಮಳೆ ಅಡ್ಡಿಯಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy