ಹಿರಿಯೂರು: ಶ್ರಾವಣ ಮಾಸದ ಮೊದಲ ಸೋಮವಾರ ಹಾಗೂ ನಾಗರ ಪಂಚಮಿ ಹಬ್ಬದ ಪ್ರಯುಕ್ತ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ದಕ್ಷಿಣ ಕಾಶಿ ಎಂದೇ ಪ್ರಖ್ಯಾತ ವಾಗಿರುವ ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವನಿಗೆ ಪೂಜೆಗಳು ಬಹಳ ವಿಜೃಂಭಣೆಯಿಂದ ನಡೆದವು.
ನಾಗರ ಪಂಚಮಿಯಂದು ದೇವಸ್ಥಾನ ಹಾಗೂ ಹುತ್ತಗಳಿಗೆ ಭಕ್ತಾದಿಗಳು ವಿಶೇಷ ಪೂಜೆ ಮಾಡಿ, ಎಲ್ಲ ಕೆಡುಕುಗಳಿಂದ ತಮ್ಮನ್ನು ರಕ್ಷಿಸಲೆಂದು ಬೇಡಿಕೊಂಡು, ಹಾಲು ಮತ್ತು ಬೆಳ್ಳಿ ಆಭರಣಗಳನ್ನು ಅರ್ಪಿಸುತ್ತಾರೆ . ಈ ಹಬ್ಬವನ್ನು ಅಣ್ಣ –ತಂಗಿಯರು ಸೇರಿಕೊಂಡು ಪೂಜಿಸುವುದು ಇನ್ನೊಂದು ವಿಶೇಷತೆಯಾಗಿದೆ.
ಹಿರಿಯೂರು ತಾಲ್ಲೂಕಿನ ದಕ್ಷಿಣ ಕಾಶಿ ಶ್ರೀ ತೇರು ಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಹೊರ ಭಾಗದಲ್ಲಿರುವ ನಾಗರ ಕಲ್ಲುಗಳಿಗೆ ಭಕ್ತಾದಿಗಳು ಹಾಲು ಸುರಿದು ಪೂಜೆ ಸಲ್ಲಿಸುವುದರ ಮುಖಾಂತರ ನಾಗರ ಪಂಚಮಿ ಹಬ್ಬವನ್ನು ಬಹಳ ವಿಶೇಷತೆಯಿಂದ ಆಚರಿಸಿದರು .
ಇದೇ ಸಂದರ್ಭದಲ್ಲಿ ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರ ಸ್ವಾಮಿ ದೇವಸ್ಥಾನದ ಅರ್ಚಕರು ತೇರುಮಲ್ಲೇಶ್ವರ ಸ್ವಾಮಿಯ ಹಾಗೂ ದೇವಸ್ಥಾನದ ವೈಶಿಷ್ಟ್ಯಗಳ ಬಗ್ಗೆ ನಮ್ಮ ತುಮಕೂರು ಮಾಧ್ಯಮದ ಪ್ರತಿನಿಧಿಗಳೊಂದಿಗೆ ಹಂಚಿಕೊಂಡರು.
ವರದಿ: ಮುರುಳಿಧರನ್ ಆರ್. ಚಿತ್ರದುರ್ಗ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy