ಎಚ್.ಡಿ.ಕೋಟೆ ತಾಲ್ಲೂಕಿನ ನಾಗರಹೊಳೆ ಅಭಯಾರಣ್ಯದ ಬಳ್ಳೆ ಹಾಡಿ ನಿವಾಸಿ ಹದಿನೆಂಟು ವರ್ಷದ ಮಂಜು ಬಿನ್ ಬೆಟ್ಚದ ಹುಲಿ ಅಲಿಯಾಸ್ ಬಿ.ಕಾಳ ಹುಲಿ ದಾಳಿಯಿಂದ ಮೃತಪಟ್ಟಿದ್ದಾರೆ.
ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಡಿ.ಬಿ.ಕುಪ್ಪೆ ವಲಯದ ಬಳ್ಳೆ ಕಾಡಿನ ಒಳಭಾಗದಲ್ಲಿ ಹುಲಿ ದಾಳಿ ನಡೆಸಿದ್ದು, ಹುಲಿಯ ದಾಳಿಗೆ ವ್ಯಕ್ತಿ ಸಾವನ್ನಪ್ಪಿದ್ದಾರೆ. ವ್ಯಕ್ತಿಯ ಮೃತದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆಯ ಶವಾಗಾರದಲ್ಲಿ ಇಡಲಾಗಿದೆ.
ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ, ಡಿವೈಎಸ್ ಪಿ ಮಹೇಶ್, ಉಪನೀರಿಕ್ಷಕ ತಮ್ಮೇಗೌಡ, ತಂಗರಾಜು, ಕಿರಣ್ ಭೇಟಿ ನೀಡಿ ವೀಕ್ಷಣೆ ನಡೆಸಿದ್ದಾರೆ.
ಘಟನೆಯನ್ನು ಖಂಡಿಸಿ ಬಳ್ಳೆ ಗ್ರಾಮದಲ್ಲಿ ಮೃತ ವ್ಯಕ್ತಿಯ ಪೋಷಕರು ಹಾಗೂ ಹಾಡಿ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದಾಗಿ ಮೈಸೂರು ಮಾನಂದವಾಡಿ ಹೆದ್ದಾರಿಯಲ್ಲಿ ಸಂಚಾರ ಕೆಲ ಕಾಲ ಅಡಚಣೆ ಉಂಟಾಗಿತ್ತು. ಪ್ರತಿಭಟನೆ ನಿರತರನ್ನು ಮನವೊಲಿಸಲು ಡಿವೈಎಸ್ ಪಿ ತೆರಳಿದ್ದಾರೆ. ಇನ್ನೂ ಪ್ರಕರಣ ದಾಖಲಾಗದ ಹಿನ್ನಲೆ ಮರಣೋತ್ತರ ಪರೀಕ್ಷೆಯನ್ನು ಮಾಡಿಲ್ಲ. ದಾಳಿ ಮಾಡಿದ ಹುಲಿಯು ನಾಲ್ಕು ಮರಿಗಳ ತಾಯಿ ಬ್ಯಾಕ್ ವಾಟರ್ ಫೀಮೇಲ್ ಎಂದು ಹೇಳಲಾಗುತ್ತಿದೆ.
ವರದಿ: ಮಲಾರ ಮಹದೇವ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy