ಬಳ್ಳಾರಿ : ನಕಲಿ ಪೊಲೀಸ್ ಎಂದು ಡೆಪ್ಯೂಟಿ ಫಾರೆಸ್ಟ್ ರೇಂಜರ್ ಆಫೀಸರ್ ಮೇಲೆ ಜನ ಹಲ್ಲೆ ನಡೆಸಿದ ಘಟನೆ ನಗರದ ವಿಮ್ಸ್ ಆಸ್ಪತ್ರೆ ಸಮೀಪದ ಬಳಿ ನಡೆದಿದೆ.
ಡೆಪ್ಯೂಟಿ ಫಾರೆಸ್ಟ್ ರೇಂಜರ್ ಕೆಂಚಪ್ಪ ಅವರ ಮೇಲೆ ಜನರು ಹಲ್ಲೆ ನಡೆಸಿದ್ದು, ಪೊಲೀಸರ ಸೋಗಿನಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ.
ಹೋಟೆಲ್ ಹಾಗೂ ಅಂಗಡಿಗಳಲ್ಲಿ ಕೆಂಚಪ್ಪ ಹಣ ವಸೂಲಿ ಮಾಡುತ್ತಿದ್ದರು. ಅಲ್ಲದೇ ಕೆಂಚಪ್ಪ ನಕಲಿ ಐಡಿ ಕೂಡ ಹೊಂದಿದ್ದರಿಂದ ತ್ರಿಬಲ್ ಸ್ಟಾರ್ ಹಾಕಿಕೊಂಡಿದ್ದರಿಂದ ಕೆಂಚಪ್ಪರ ಮೇಲೆ ಅನುಮಾನಗೊಂಡ ಹೋಟೆಲ್ ಸಿಬ್ಬಂದಿ ಕೌಲ್ ಬಜಾರ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಬರುವಷ್ಟರಲ್ಲಿ ನಕಲಿ ಪೊಲೀಸ್ ಎಂದು ತಿಳಿದು ಕೆಂಚಪ್ಪ ಮೇಲೆ ಸಾರ್ವಜನಿಕರು ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದ ಮೇಲೆ ಅವರು ಡೆಪ್ಯೂಟಿ ಫಾರೆಸ್ಟ್ ರೇಂಜರ್ ಎಂದು ಗೊತ್ತಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy