ತಿಪಟೂರು ಕಲ್ಪತರು ಇಂಜಿನಿಯರಿಂಗ್ ಸಭಾಂಗಣದಲ್ಲಿ ಅಂಬೇಡ್ಕರ್ ಅವರ ಜನ್ಮ ತಿಂಗಳ ಅಂಗವಾಗಿ ಅಂಬೇಡ್ಕರ್ ನಮನ ಎಂಬ ಕಾರ್ಯಕ್ರಮವನ್ನು ಏಪ್ರಿಲ್ 24 ಭಾನುವಾರದಂದು ಬೆಳಗ್ಗೆ 10.30 ರಿಂದ ಸಂಜೆ 4 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ವಿಚಾರಧಾರೆ ಗಳ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜನಸ್ಪಂದನ ಟ್ರಸ್ಟ್ ನ ಅಧ್ಯಕ್ಷ ಶ್ರೀ ಬಿ ಶಶಿಧರ್ ಅವರು ತಿಳಿಸಿದರು .
ಈ ಕಾರ್ಯಕ್ರಮದಲ್ಲಿ ಚಿಂತಕರು ಹಾಗೂ ಹಿರಿಯ ಪತ್ರಕರ್ತರಾದ ದಿನೇಶ್ ಅಮೀನ್ ಮಟ್ಟು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ವಹಿಸಲಿದ್ದು, ಉಪನ್ಯಾಸವನ್ನು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ನೀಡಲಿದ್ದು ,ಮುಖ್ಯ ಅತಿಥಿಗಳಾಗಿ ದೊಡ್ಡಿಪಾಳ್ಯ ನರಸಿಂಹಮೂರ್ತಿ ಹಾಗೂ ಅನೇಕ ಚಿಂತಕರು ಹಾಗೂ ಜನಸ್ಪಂದನ ಅಧ್ಯಕ್ಷರು ಕಾಂಗ್ರೆಸ್ ಮುಖಂಡ ಸಿ.ಬಿ.ಶಶಿಧರ್ ರವರು ಈ ಸಂವಾದದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ವರದಿ: ಆನಂದ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5