ಮಾರ್ಚ್ ತಿಂಗಳಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು.ಆದರೆ ನಾಳೆ (21/04/2013) ದ್ವಿತೀಯ ಪಿಯುಸಿ ಪರೀಕ್ಷೆ ಸುಮಾರು 11 ಗಂಟೆಗೆ ವೆಬ್ ಸೈಟ್ ನಲ್ಲಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಇದರ ಬಗ್ಗೆ ಅಧಿಕೃತವಾಗಿ ಇದರ ಬಗ್ಗೆ ಆದೇಶ ಹೊರಡಿಸಿದೆ. ಈ ಕುರಿತು ನಾಳೆ 10 ಗಂಟೆಗೆ ಸುದ್ದಿಗೋಷ್ಟಿಯಲ್ಲಿ ಪ್ರಕಟವಾಗಲಿದೆ. ನಂತರ 11 ಗಂಟೆಗೆ ಫಲಿತಾಂಶಕ್ಕಾಗಿ ನೀವು ಈ www.karresults.nic.in ವೆಬ್ಸೈಟ್ಗೆ ಭೇಟಿ ನೀಡಬಹುದು.
ರಾಜ್ಯದ 5,716 ಪಿಯು ಕಾಲೇಜುಗಳಿಂದ ಒಟ್ಟು 7,26,195 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ನೋಂದಾಯಿಸಿದ್ದು, ಈ ಪೈಕಿ 3,63,698 ಬಾಲಕರು ಮತ್ತು 3,62.497 ಬಾಲಕಿಯರು ಪರೀಕ್ಷೆಗೆ ಹಾಜರಾಗಿದ್ದರು.
ಈ ಹಿಂದೆ ಮೌಲ್ಯಮಾಪನದ ಸಮಯದಲ್ಲಿ KSEABಯ ಮೂಲಗಳ ಪ್ರಕಾರ, ಹಿಂದಿನ ಯೋಜನೆಯು ಮೌಲ್ಯಮಾಪನ ಕಾರ್ಯವನ್ನು 10 ರಿಂದ 12 ದಿನಗಳಲ್ಲಿ ಪೂರ್ಣಗೊಳಿಸಿ ಏಪ್ರಿಲ್ ಅಂತ್ಯದ ವೇಳೆಗೆ ಫಲಿತಾಂಶಗಳನ್ನು ಪ್ರಕಟಿಸಲಾಗುತ್ತದೆ ಎಂದು ತಿಳಿಸಲಾಗಿತ್ತು.
ಅದರೆ ನಾಳೆ (21/04/2013) ರಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ನಿರ್ಧರಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


