ತುರುವೇಕೆರೆ: ತಾಲ್ಲೂಕು ಒಕ್ಕಲಿಗರ ಸಂಘ , ಕಾಲಭೈರವ ಮಹಿಳಾ ಒಕ್ಕಲಿಗರ ಸಂಘ , ತಾಲ್ಲೂಕು ಒಕ್ಕಲಿಗರ ನೌಕರರ ಸಂಘ ಹಾಗೂ ಶ್ರೀ ಕೆಂಪೇಗೌಡ ಯುವಸೇನೆ ತುರುವೇಕೆರೆ ಇವರ ಸಂಯುಕ್ತ ಆಶ್ರಯದಲ್ಲಿ ನಾಡಪ್ರಭು ಕೆಂಪೇಗೌಡರ 513ನೇ ಜಯಂತಿಯನ್ನು ಜೂನ್ 27ರಂದು ಬೆಳಗ್ಗೆ 10:30ಕ್ಕೆ ಕೆ.ಹಿರಣ್ಣಯ್ಯ ಬಯಲು ರಂಗ ಮಂದಿರದಲ್ಲಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಶಾಸಕ ಮಸಾಲಾ ಜಯರಾಮ್ ತಿಳಿಸಿದರು.
ಕಾರ್ಯಕ್ರಮದ ರೂಪುರೇಷೆಯ ಬಗ್ಗೆ ಮಾತನಾಡಿದ ಶಾಸಕರು , ದಿವ್ಯ ಸಾನಿಧ್ಯವನ್ನು ಶ್ರೀ ಅಧಿಚುಂಚನಗಿರಿ ಮಠ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಇವರು ವಹಿಸಲಿದ್ದು, ಅಧ್ಯಕ್ಷತೆಯನ್ನು ಪಿ.ಹೆಚ್. ಧನಪಾಲ್. ವಹಿಸಲಿದ್ದಾರೆ ಪ್ರದಾನ ಭಾಷಣಕಾರರಾಗಿ ಡಾ.ದೊರೇಶ್ ಬಿಳಿಕೆರೆ ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಜಯಂತ್ಯುತ್ಸವದ ಪ್ರಯುಕ್ತ ಬೆಳಿಗ್ಗೆ 11 ಘಂಟೆಯಿಂದ ಬೈಕ್ ರಾಲಿ ಯನ್ನು ಹಮ್ಮಿಕೊಳ್ಳಲಾಗಿದೆ. ನಂತರ ಸ್ವಾಮೀಜಿಗಳನ್ನು ಮೆರವಣಿಗೆಯ ಮೂಲಕ ಪ್ರವಾಸಿಮಂದಿರದಿಂದ 12 ಪ್ರಾಕಾರದ ನೃತ್ಯದೊಂದಿಗೆ ಮತ್ತು ಜಾನಪದ ಕಲಾ ತಂಡಗಳೊಂದಿಗೆ ವೇದಿಕೆಗೆ ಕರೆ ತರಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಬೆಳಿಗ್ಗೆ ತಿಂಡಿ ಮತ್ತು ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ವೇದಿಕೆ ಕಾರ್ಯಕ್ರಮದಲ್ಲಿ ಇಬ್ಬರು ಸಾಧಕರಿಗೆ ಸನ್ಮಾನಿಸಲಾಗುವುದು. ಸಾರ್ವಜನಿಕರು ಹಾಗೂ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕೆಂದು ಅವರು ಮನವಿ ಮಾಡಿಕೊಂಡರು.
ಮಾಜಿ ಶಾಸಕರಾದ ಎಂ.ಟಿ. ಕೃಷ್ಣಪ್ಪನವರು ಮಾತನಾಡಿ, ನಾಡ ಪ್ರಭು ಕೆಂಪೇಗೌಡರ ಜಯಂತಿಯನ್ನು ಬಹಳ ಆದ್ದೂರಿಯಾಗಿ ಆಚರಿಸಲಾಗುತ್ತಿದೆ . ಅವರು ಯಾವುದೇ ಸಮಾಜಕ್ಕೆ ಸೀಮಿತವಾದ ವ್ಯಕ್ತಿಯಲ್ಲ, ಎಲ್ಲ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ವಕ್ಕಲಿಗರ ಸಂಘದ ತಾಲ್ಲೂಕು ಅಧ್ಯಕ್ಷರಾದ ಧನ್ ಪಾಲ್. ಡಿ.ಪಿ.ರಾಜು, ಎನ್.ಆರ್ .ಜಯರಾಮ್, ವಕೀಲ ಮುದ್ದೇಗೌಡ, ಕೊಂಡಜ್ಜಿ ವಿಶ್ವನಾಥ್, ಕಾಳಂಜಿಹಳ್ಳಿ ಸೋಮಶೇಖರ್, ವಿ.ಬಿ ಸುರೇಶ್ ಕರುನಾಡು ವಿಜಯ ಸೇನೆಯ ತಾಲ್ಲೂಕು ಅಧ್ಯಕ್ಷ ಹೆಚ್.ಎಸ್. ಸುರೇಶ್ ಮತ್ತಿತರಿದ್ದರು.
ವರದಿ: ಸುರೇಶ್ ಬಾಬು, ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz