ಕೊರಟಗೆರೆ: ಬಸಣ್ಣನವರು ಜಗತ್ತಿಗೆ ಅಮೂಲ್ಯವಾದ ಕೊಡುಗೆ ನೀಡಿದ್ದಾರೆ ಅವರ ಪ್ರತಿಯೊಂದು ವಾಕ್ಯ ನಮಗೆಲ್ಲಾ ದಾರಿದೀಪ ಎಂದು ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ತಿಳಿಸಿದರು.
ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಏರ್ಪಡಿಸಲಾದ ಪತ್ರಿಕಾಗೋಷ್ಠಿ ಮುಂಚಿತವಾಗಿ ಬಸವಣ್ಣ ಜಯಂತಿ ಪ್ರಯುಕ್ತ ಬಸವಣ್ಣನವರ ಪುಷ್ವಾರ್ಚನೆಯನ್ನು ಮಾಡಿ ನಂತರ ಮಾತನಾಡಿದ ಅವರು, ನಮ್ಮ ಪಕ್ಷದ ಪಂಚರತ್ನ ಮಹತ್ವ ಯೋಜನೆಯ ಬಗ್ಗೆ ಜನರಿಗೆ ತಿಳಿಸಲು ಪಕ್ಷದ ವತಿಯಿಂದ ಇಂದು ಮಧ್ಯಾಹ್ನ 3 ಗಂಟೆಗೆ ಹೊಳವನಹಳ್ಳಿ ಗ್ರಾಮದಲ್ಲಿ ಸಭೆಯನ್ನು ಆಯೋಜಿಸಿದ್ದು, ಈ ಸಭೆಗೆ ಮುಖ್ಯ ಅತಿಥಿಗಳಾಗಿ ಮಣ್ಣಿನ ಮಗ ಮಾಜಿ ಪ್ರಧಾನಿ ದೇವಗೌಡ ಅಪ್ಪಾಜಿ ಅವರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಸಿ ಎಂ ಇಬ್ರಾಹಿಂ ಆಗಮಿಸಲಿದ್ದು, ಹೆಚ್ಚಿನ ಸಂಖೈಯಲ್ಲಿ ಕಾರ್ಯಕರ್ತರು, ಮುಖಂಡರು ಆಗಮಿಸಿ ಯಶಸ್ವಿಗೊಳಿಸಬೇಕೆಂದು ತಿಳಿಸಿದರು.
ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಾಲಿಂಗಪ್ಪ ಮಾತನಾಡಿ, ಜೆಡಿಎಸ್ ಪಕ್ಷದ ಪ್ರಚಾರವನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಹೊಳವನಹಳ್ಳಿ ಗ್ರಾಮದಲ್ಲಿ ಸಭೆಯನ್ನು ಆಯೋಜಿಸಿದ್ದು, ಈ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವಗೌಡರು ಹಾಗೂ ರಾಜ್ಯಾಧ್ಯಕ್ಷರಾದ ಸಿಎಂ ಇಬ್ರಾಹಿಂ ಆಗಮಿಸಲಿದ್ದಾರೆ ಪಕ್ಷದ ಕಾರ್ಯಕರ್ತರು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕೆಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕಾರ್ಯಾದ್ಯಕ್ಷ ನರಸಿಂಹರಾಜು, ಜೆಡಿಎಸ್ ವಕ್ತಾರ ಲಕ್ಷ್ಮೀಶ್, ಕಾಮರಾಜು, ಸಿದ್ದಮಲ್ಲಪ್ಪ, ಕಾಕಿ ಮಲ್ಲಣ್ಣ, ರಾಜಣ್ಣ, ಮುಖಂಡರಾದ ರಮೇಶ್, ಲಕ್ಷ್ಮಣಪ್ಪ, ವೆಂಕಟೇಶ್, ಹನುಮಂತರಾಜು ,ಸಿದ್ದರಾಜು ಜೆಡಿಎಸ್ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಹಾಜರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA