ತುಮಕೂರು: ಹೇಮಾವತಿ ನಾಲಾ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್, ಪತ್ನಿ, ಪುತ್ರಿಯೊಂದಿಗೆ ನಾಲೆಗೆ ಹಾರಿ ಆತ್ಯಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಗುಬ್ಬಿ ತಾಲ್ಲೂಕಿನ ಸಾಗರನಹಳ್ಳಿ ಗೇಟ್ ಸಮೀಪ ನಡೆದಿದೆ.
ಎಂಜಿನಿಯರ್ 55 ವರ್ಷ ವಯಸ್ಸಿನ ರಮೇಶ್ ಹಾಗೂ ಅವರ ಪತ್ನಿ 45 ವರ್ಷ ವಯಸ್ಸಿನ ಮಮತಾ ಮತ್ತು 25 ವರ್ಷ ವಯಸ್ಸಿನ ಪುತ್ರಿ ಶುಭಾ ಆತ್ಮಹತ್ಯೆಗೆ ಶರಣಾದವರು ಎಂದು ಹೇಳಲಾಗಿದ್ದು, ಮಮತಾ ಹಾಗೂ ಶುಭಾ ಅವರ ಮೃತದೇಹ ಪತ್ತೆಯಾಗಿದೆ. ರಮೇಶ್ ಮೃತದೇಹಕ್ಕಾಗಿ ಶೋಧ ನಡೆಯುತ್ತಿದೆ.
ಸದ್ಯದ ಮಾಹಿತಿಗಳ ಪ್ರಕಾರ ಶುಭಾಗೆ ಕಳೆದ ತಿಂಗಳಷ್ಟೇ ಮದುವೆ ಮಾಡಿಕೊಡಲಾಗಿತ್ತು. ಕೌಟುಂಬಿಕ ಕಲಹದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಪೊಲೀಸರ ತನಿಖೆಯ ಬಳಿಕವೇ ಹೆಚ್ಚಿನ ಮಾಹಿತಿ ದೊರಕಬೇಕಿದೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700