ಬೆಳಗಾವಿ: ಡಿಸೆಂಬರ್ 13ರಿಂದ(ನಾಳೆ) ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಸಂಬಂಧ ಎಲ್ಲ ಸಿದ್ಧತೆಗಳನ್ನು ನಡೆಸಲಾಗಿದೆ ಎಂದು ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
ಕೋವಿಡ್ ಮಾರ್ಗಸೂಚಿಯಂತೆ ಅಧಿವೇಶನ ನಡೆಯಲಿದೆ. ಸುಗಮವಾಗಿ ಕಲಾಪ ನಡೆಯುವ ವಿಶ್ವಾಸವಿದ್ದು, ಎಲ್ಲಾ ಶಾಸಕರು ಕಲಾಪದಲ್ಲಿ ಭಾಗವಹಿಸಲು ಎಂದು ಹೇಳಿದ್ದಾರೆ.
ನಿಯಮಾನುಸಾರ ಎಲ್ಲರಿಗೂ ಮಾತನಾಡಲು ಅವಕಾಶ ನೀಡಲಾಗುತ್ತದೆ. ಎಲ್ಲ ಶಾಸಕರು ಅಧಿವೇಶನದಲ್ಲಿ ಭಾಗಿಯಾಗಬೇಕೆಂದು ಎಲ್ಲ ಪಕ್ಷಗಳ ಶಾಸಕರಿಗೆ ಸ್ಪೀಕರ್ ಮನವಿ ಮಾಡಿದ್ದಾರೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700