ಮಂಗಳೂರು: ಬಿಜೆಪಿ ಪ್ರತಿಯೊಂದು ವಿಚಾರದಲ್ಲಿಯೂ ರಾಜಕೀಯ ಮಾಡುವ ಪ್ರಯತ್ನ ಮಾಡುತ್ತದೆ. ಎತ್ತಿನಹೊಳೆ ಯೋಜನೆ ಜಾರಿಗೆ ತಂದಾಗ ಪ್ರತಿಭಟನೆ, ಪಾದಯಾತ್ರೆ ಮಾಡಿದ್ದ ಸಂಸದ ನಳಿನ್ ಕುಮಾರ್ ಕಟೀಲು ಇದೀಗ ಹಾಸನ, ಕೋಲಾರದಲ್ಲಿ ಭಾಗದಲ್ಲಿ ಅದನ್ನು ನಾವೇ ಮಾಡಿದ್ದು ಎಂದು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದು ಮಾಜಿ ಸಚಿವ, ಕಾಂಗ್ರೆಸ್ ನ ಹಿರಿಯ ನಾಯಕ ಬಿ.ರಮಾನಾಥ ರೈ ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿ ತನ್ನ ಹಿಂದಿನ ಚುನಾವಣೆಯ ಪ್ರಣಾಳಿಕೆಯಲ್ಲಿಯೂ ಕಸ್ತೂರಿ ರಂಗನ್ ವರದಿ ರದ್ದುಪಡಿಸುವುದಾಗಿ ಹೇಳಿಕೊಂಡಿತ್ತು. ಆದರೆ ಐದು ವರ್ಷವಾದರೂ ಆಗಿಲ್ಲ ಎಂದರು.
ಎತ್ತಿನ ಹೊಳೆ ವಿಚಾರದಲ್ಲಿಯೂ ನಾನು ಎಂದೂ ಹಿಪಾಕ್ರಸಿ ಪಾಲಿಟಿಕ್ಸ್ ಮಾಡಿಲ್ಲ. ಎತ್ತಿನಹೊಳೆ ಯೋಜನೆಯಿಂದ ಜಿಲ್ಲೆಯ ಜನರಿಗೆ ತೊಂದರೆ ಆದರೆ ಪಶ್ಚಿಮ ವಾಹಿನಿ ಯೋಜನೆಗಾಗಿ ಸುಮಾರು 60 ಮಂದಿಯ ರೈತರ ನಿಯೋಗವನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯರ ಬಳಿ ಕರೆದೊಯ್ದು, ಬಜೆಟ್ ನಲ್ಲಿ ಹಣ ಮಂಜೂರು ಮಾಡಲಾಗಿತ್ತು. ಬಳಿಕ ಬಿಜೆಪಿ ಸರಕಾರ ಆಡಳಿತಕ್ಕೆ ಬಂದ ಕಳೆದ ವರ್ಷ ಮತ್ತು ಈ ವರ್ಷ ಬಜೆಟ್ ನಲ್ಲಿ ಹಣ ಬಿಡುಗಡೆ ಮಾಡಿದ್ದಾರೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz