ನಾಳೆ ದಕ್ಷಿಣ ಕಾಶಿ ನಂಜನಗೂಡಿಗೆ ಸಿಎಂ ಬೊಮ್ಮಾಯಿ ಭೇಟಿ ನೀಡಲಿದ್ದಾರೆ.ನಂಜನಗೂಡಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಸಿಎಂ ನಾಳೆ ನೀಡಲಿದ್ದಾರೆ.
ನಂಜನಗೂಡು ಶ್ರೀಕಂಠೇಶ್ವರ ದೇವಾಲಯ ಅಭಿವೃದ್ಧಿ ಕಾಮಗಾರಿ ಮತ್ತು ಹೆಡಿಯಾಲ ಏತ ನೀರಾವರಿ, ನದಿ ಮೂಲದಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.
ನಂಜನಗೂಡು ನಂಜುಂಡೇಶ್ವರ ದೇವಾಲಯ ಬಳಿ ನಿರ್ಮಿಸಿರುವ ವೇದಿಕೆಯಲ್ಲಿ ಕಾರ್ಯಕ್ರಮ ಜರುಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ಬಿ.ಹರ್ಷವರ್ಧನ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಭಾಗಿಯಾಗಲಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಸ್ಥಳೀಯ ಶಾಸಕ ಹರ್ಷವರ್ಧನ್ ಅಭಿವೃದ್ಧಿ ಕಾಮಗಾರಿಗಳನ್ನ ಕೈಗೆತ್ತಿಕೊಂಡಿದ್ದಾರೆ. ಮುಂದಿನ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಈಗಿನಿಂದಲೇ ಸಿದ್ಧತೆ ಆರಂಭಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


