ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ನಾಳೆ ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಗೆ ಬರಲು ಸಜ್ಜಾಗಿದೆ. ಈ ಹಿನ್ನೆಲೆ ಬೆಂಗಳೂರಿನ ವಿಜಯನಗರದ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿರುವ ಕಿಚ್ಚ ಸುದೀಪ್ ಅಭಿಮಾನಿಗಳು, ಬೃಹತ್ ಮೆರವಣಿಗೆ ನಡೆಸಿದ್ದಾರೆ.
101 ಕಳಶಗಳನ್ನ ಹೊತ್ತು ಮಹಿಳಾ ಅಭಿಮಾನಿಗಳು ಮೆರವಣಿಗೆ ಮಾಡಿದ್ದು,ಈ ವೇಳೆ ಡೋಳ್ಳು ಕುಣಿತ , ಚಂಡೆವಾದ್ಯ , ಪ್ರಚಾರದ ಟ್ಯಾಬ್ಲೋ ಜೊತೆಗೆ ಅಭಿನಯ ಚಕ್ರವರ್ತಿ ಬಾವುಟ ಹಿಡಿದು ಅದ್ಧೂರಿಯಾಗಿ ಮೆರವಣಿಗೆ ಮಾಡಿದ್ದಾರೆ.
ಮಾತ್ರವಲ್ಲದೆ ಕಿಚ್ಚನ ಕಟೌಟ್ ಗೆ ಹಾರಹಾಕಿ ಪಟಾಕಿ ಸಿಡಿಸಿದ್ದು, ಬೆಂಗಳೂರಿನ ಮಾಗಡಿ ರಸ್ತೆಯ ವಿರೇಶ ಚಿತ್ರಮಂದಿರದ ಮೆರವಣಿಗೆ ಮಾಡಿರುವ ಕಿಚ್ಚನ ಫ್ಯಾನ್ಸ್ ಎಲ್ಲರ ಗಮನ ಸೆಳೆದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy