ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯಾಗಿದ್ದು, ಬೆಳ್ಳಾರೆ ಬಸ್ ನಿಲ್ದಾಣದಲ್ಲಿ ಅಂತಿಮ ದರ್ಶನಕ್ಕೆ ಆಗಮನಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ ಕುಮಾರ ಕಟೀಲ್ ಅವರ ಕಾರಿಗೆ ಹಿಂದೂ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಚಿವ ಸುನಿಲ್ ಕುಮಾರ್ ಸೇರಿದಂತೆ ಹಲವು ನಾಯಕರು ಸ್ಥಳಕ್ಕೆ ಭೇಟಿ ನೀಡಿ ಮೃತ ಬೆಳ್ಳಾರೆ ಪ್ರವೀಣ್ ನೆಟ್ಟಾರು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಲು ಯತ್ನಿಸಿದರು.
ಈ ವೇಳೆ ಹಿಂದುತ್ವ ಪರ ಸಂಘಟನೆಗಳ ಕಾರ್ಯಕರ್ತರು ಆಕ್ರೋಶಗೊಂಡು ನಳಿನ್ ಕುಮಾರ್ ಕಾರಿನ ಮೇಲೆ ಮುಗಿಬಿದ್ದರು. ಕಾರನ್ನು ಪಲ್ಟಿ ಮಾಡಲೂ ಯತ್ನಿಸಿದ್ದು ಕಾರಿನ ಟೈರ್ ನಿಂದ ಗಾಳಿ ಹೊರಬಿಟ್ಟರು.
ಪೊಲೀಸರೊಂದಿಗೆ ಕಾರ್ಯಕರ್ತರು ವಾಗ್ವಾದಕ್ಕಿಳಿದರು. ‘ಬೇಕೇ ಬೇಕು, ನ್ಯಾಯ ಬೇಕು’ ಎಂಬ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಂಗಡಿಗಳನ್ನು ಮುಚ್ಚಿಸುತ್ತಿರುವ ಪೊಲೀಸರು ಗುಂಪು ಸೇರಿದ್ದ ಕಾರ್ಯಕರ್ತರನ್ನುಮೇಲೆ ಲಾಠಿ ಬೀಸಿದ್ದಾರೆ.ಪುತ್ತೂರು ಡಿಪೋಗೆ ಸೇರಿದ ಬಸ್ ಪುತ್ತೂರಿನಿಂದ ಸ್ಟೇಟ್ ಬ್ಯಾಂಕ್ ಕಡೆ ಹೋಗುತ್ತಿದ್ದಾಗ ಬೊಳ್ವಾರು ಬಳಿ ಮೇಲೆ ಕಲ್ಲುತೂರಾಟ ನಡೆಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy