ಮುಂಬೈ: ನವೆಂಬರ್ 19ರಂದು ಇಂದಿರಾ ಗಾಂಧಿ ಜನ್ಮ ದಿನ ಇರುವುದರಿಂದ ಭಾರತ್ ಜೋಡೋ ಯಾತ್ರೆಯಲ್ಲಿ ಮಹಿಳೆಯರು ಮಾತ್ರ ಭಾಗವಹಿಸಲಿದ್ದಾರೆ.
ಇಂದಿರಾ ಗಾಂಧಿ ನೆನಪಿನಲ್ಲಿ ಈ ಪಾದಯಾತ್ರೆಯಲ್ಲಿ ಭಾಗವಹಿಸಲು ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.
ಇಂದಿರಾಗಾಂಧಿ ಜಯಂತಿಯಂದು ರಾಹುಲ್ ಗಾಂಧಿ ಅವರೊಂದಿಗೆ ಮಹಿಳೆಯರು ಮಾತ್ರ ನಡೆಯಲಿದ್ದಾರೆ. ಇಡೀ ದಿನ ಮಹಿಳೆಯರು ರಾಹುಲ್ ಗಾಂಧಿಯವರೊಂದಿಗೆ ಪಾದಯಾತ್ರೆ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಖಚಿತಪಡಿಸಿದ್ದಾರೆ.
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಈ ಹಿಂದೆ ತಮ್ಮ ಅಜ್ಜಿ ಇಂದಿರಾ ಗಾಂಧಿ ಅವರ ಪುಣ್ಯತಿಥಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದರು.
ನೀವು ಈ ದೇಶಕ್ಕಾಗಿ ಪ್ರಾಣವನ್ನೇ ತ್ಯಾಗ ಮಾಡಿದ್ದೀರಿ. ಆ ತ್ಯಾಗ ವ್ಯರ್ಥವಾಗಲು ನಾನು ಬಿಡುವುದಿಲ್ಲ. ಈ ದೇಶವನ್ನು ಒಗ್ಗೂಡಿಸುತ್ತೇನೆ ಎಂದು ರಾಹುಲ್ ಗಾಂಧಿ ಕುರಿತು ಟ್ವೀಟ್ ಮಾಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy