ಕುಣಿಗಲ್: ಇಲ್ಲಿನ ಮಾರ್ಕೋನಹಳ್ಳಿ ಕೋಡಿ ಹಳ್ಳದ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ನಾಲ್ವರು ನೀರಿನಲ್ಲಿ ಕೊಚ್ಚಿಹೋದ ದಾರುಣ ಘಟನೆ ಭಾನುವಾರ ನಡೆದಿದ್ದು, ನೀರಿನ ಪ್ರಮಾಣ ಏಕಾಏಕಿ ಹೆಚ್ಚಾಗಿದ್ದರಿಂದಾಗಿ ಈ ದುರಂತ ಸಂಭವಿಸಿದೆ ಎಂದು ವರದಿಯಾಗಿದೆ.
ಕುಣಿಗಲ್ ಪಟ್ಟಣದ ಕೋಟೆ ಪ್ರದೇಶದ ಫರ್ವಿನ್ ತಾಜ್(23), ಸಾದೀಯ(17), ಎಡಿಯೂರು ಹೋಬಳಿ ಬೀರಗಾನಹಳ್ಳಿ ಗ್ರಾಮದ ರಾಜು(23), ಅಪ್ಪು(20) ನೀರಿನಲ್ಲಿ ಕೊಚ್ಚಿ ಹೋದವರು ಎಂದು ಹೇಳಲಾಗಿದೆ. ಇವರು ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಮಾರ್ಕೋನಹಳ್ಳಿ ಜಲಾಶಯಕ್ಕೆ ಎರಡು ಸಾವಿರ ಕ್ಯೂಸೆಕ್ಸ್ ಒಳ ಹರಿವು ಹೆಚ್ಚಾಗಿದ್ದು, ಪರಿಣಾಮವಾಗಿ ಇವರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎನ್ನಲಾಗಿದೆ.
ಘಟನೆ ವೇಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ 11 ವರ್ಷದ ತಬ್ರೇಜ್ ಎಂಬ ಬಾಲಕನನ್ನು ಕುಟುಂಬಸ್ಥರು ಎಳೆದು ಹಿಡಿದು ರಕ್ಷಿಸಿದ್ದಾರೆ. ಉಳಿದ ನಾಲ್ವರು ಕಣ್ಣೆದುರೇ ಜಲಸಮಾಧಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700