ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ನಾಮಪತ್ರವನ್ನು ಸಲ್ಲಿಸಿದ್ದಾರೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 8 ಕೊನೆಯ ದಿನವಾಗಿದೆ.
ಇದಕ್ಕೂ ಮುನ್ನ ದೆಹಲಿಯ ಎಐಸಿಸಿ ಕಚೇರಿಗೆ ತೆರಳಿದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾನು ನನ್ನ ನಾಮಪತ್ರವನ್ನು ಸಲ್ಲಿಸಲಿದ್ದೇನೆ ಎಂದು ಹೇಳಿದ್ದಾರೆ.
ಅಶೋಕ್ ಗೆಹ್ಲೋಟ್, ದಿಗ್ವಿಜಯ್ ಸಿಂಗ್ ಮತ್ತು ಭೂಪಿಂದರ್ ಹೂಡಾ ಸೇರಿದಂತೆ ಕಾಂಗ್ರೆಸ್ ನಾಯಕರು ಖರ್ಗೆ ಅವರನ್ನು ಬೆಂಬಲಿಸಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಹಾಜರಿದ್ದರು.
ಇದಕ್ಕೂ ಮುನ್ನ ಕಾಂಗ್ರೆಸ್ ನಾಯಕ ಶಶಿ ತರೂರ್ ನಾಮಪತ್ರ ಸಲ್ಲಿಸಿದ್ದರು. ಜಾರ್ಖಂಡ್ ಕಾಂಗ್ರೆಸ್ ನಾಯಕ ಕೆ.ಎನ್.ತ್ರಿಪಾಠಿ ಕೂಡ ನಾಮಪತ್ರ ಸಲ್ಲಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy