nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೇಲ್ವರ್ಗ–ಕೆಳವರ್ಗ ಪದ ಬಳಕೆಯೇ ಸರಿ ಇಲ್ಲ: ಶಾಸಕ ಕೆ.ಎನ್.ರಾಜಣ್ಣ

    March 2, 2026

    ಬಳ್ಳಾರಿ:  ಮಧ್ಯಪ್ರಾಚ್ಯ ದೇಶಗಳಲ್ಲಿನ ಬಿಕ್ಕಟ್ಟು — ಬಳ್ಳಾರಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ

    March 2, 2026

    ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್

    March 1, 2026
    Facebook Twitter Instagram
    ಟ್ರೆಂಡಿಂಗ್
    • ಮೇಲ್ವರ್ಗ–ಕೆಳವರ್ಗ ಪದ ಬಳಕೆಯೇ ಸರಿ ಇಲ್ಲ: ಶಾಸಕ ಕೆ.ಎನ್.ರಾಜಣ್ಣ
    • ಬಳ್ಳಾರಿ:  ಮಧ್ಯಪ್ರಾಚ್ಯ ದೇಶಗಳಲ್ಲಿನ ಬಿಕ್ಕಟ್ಟು — ಬಳ್ಳಾರಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ
    • ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್
    • ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ
    • ಅಕ್ಕಿರಾಂಪುರ ರಾಗಿ ಖರೀದಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ದಿಢೀರ್ ಭೇಟಿ: ಪರಿಶೀಲನೆ
    • ಕರ್ನಾಟಕ ಮಾದರ ಮಹಾಸಭಾ ತಾಲ್ಲೂಕು ನೂತನ ಅಧ್ಯಕ್ಷರಾಗಿ ವಿಭೂತಿ ಸಿದ್ದಪ್ಪ ನೇಮಕ
    • ಧಾರವಾಡ:  ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ
    • ಉದ್ಯೋಗ ಪಡೆಯಲು ಯುವಕರ ಪ್ರಯತ್ನ ನಿರಂತರವಾಗಿರಲಿ: ಶಾಸಕ ಎಸ್.ಎನ್.ಚನ್ನಬಸಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ
    ರಾಜ್ಯ ಸುದ್ದಿ October 29, 2023

    ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ

    By adminOctober 29, 2023No Comments2 Mins Read
    aicc press release

    ಬೆಂಗಳೂರು: ಮುಂಬರುವ ರಾಜ್ಯ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಐವರು ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಘೋಷಿಸಿದೆ.

    ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ರಾಮೋಜಿ ಗೌಡ, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪುಟ್ಟಣ್ಣ, ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಕೆ.ಕೆ.ಮಂಜುನಾಥ್, ಆಗ್ನೆಯ ಶಿಕ್ಷಕರ ಕ್ಷೇತ್ರಕ್ಕೆ ಡಿ.ಟಿ.ಶ್ರೀನಿವಾಸ್ ಹಾಗೂ ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಡಾ.ಚಂದ್ರಶೇಖರ್ ಪಾಟೀಲ್ ಅವರನ್ನು ಅಭ್ಯರ್ಥಿಯಾಗಿ ಪರಿಷತ್ ಚುನಾವಣೆಯ ಕಣಕ್ಕಿಳಿಸಲು ಎಐಸಿಸಿ ನಿರ್ಧರಿಸಿದೆ.


    Provided by
    Provided by

    ಈಶಾನ್ಯ ಪದವೀಧರ ಕ್ಷೇತ್ರದಿಂದ ಡಾ.ಚಂದ್ರಶೇಖರ ಬಿ.ಪಾಟೀಲ್, ಬೆಂಗಳೂರು ಪದವೀಧರ ಕ್ಷೇತ್ರದಿಂದ ಎ.ದೇವೇಗೌಡ, ಆತ್ಮೀಯ ಶಿಕ್ಷಕರ ಕ್ಷೇತ್ರದಿಂದ ಡಾ.ವೈ.ಎ.ನಾರಾಯಣ ಸ್ವಾಮಿ, ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಎಸ್.ಎಲ್.ಭೋಜೆಗೌಡ, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಮರಿತಿಬ್ಬೇಗೌಡ ಜೂನ್ 21, 2024ಕ್ಕೆ ನಿವೃತ್ತಿಯಾಗಲಿದ್ದಾರೆ. ನೈಋತ್ಯ ಪದವೀಧರ ಕ್ಷೇತ್ರ ಆಯನೂರು ಮಂಜುನಾಥ್ ರಾಜೀನಾಮೆಯಿಂದ ಏಪ್ರಿಲ್ 19ರಿಂದ ತೆರವಾಗಿದ್ದು, ಈ ಸ್ಥಾನದ ಅವಧಿ 21-06-2024 ತನಕ, ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಪುಟ್ಟಣ್ಣ ರಾಜೀನಾಮೆಯಿಂದ 16ಕ್ಕೆ ತೆರವಾದ ಸ್ಥಾನದ ಅವಧಿ 2026 ರ ನವೆಂಬರ್‌ ತನಕವಿದೆ.

    ರಾಜೀನಾಮೆ ಮತ್ತು ನಿವೃತ್ತಿಯಿಂದ ತೆರವಾಗುತ್ತಿರುವ ವಿಧಾನಪರಿಷತ್ತಿನ ಈ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಮೂರು ಪಕ್ಷಗಳು ಸಿದ್ಧತೆ ಆರಂಭಿಸಿದೆ. ಮೂರು ಪಕ್ಷಗಳಲ್ಲಿ ಟಿಕೆಟ್‌ಗಾಗಿ ತೀವ್ರ ಪೈಪೋಟಿ ನಡೆಯುತ್ತಿದೆ. ಈ ಸಂಬಂಧ ಕಾಂಗ್ರೆಸ್ ನಾಲ್ಕು ಅಭ್ಯರ್ಥಿಗಳ ಹೆಸರನ್ನು ಇದೀಗ ಪ್ರಕಟಿಸಿದೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿ ರಾಜಾಜಿನಗರ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದ ಪುಟ್ಟಣ್ಣಗೆ ಎಐಸಿಸಿ ಇದೀಗ ಪರಿಷತ್ ಚುನಾವಣೆ ಟಿಕೆಟ್ ನೀಡಿದೆ. ಬಿಜೆಪಿಯಿಂದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಪರಿಷತ್ ಸದಸ್ಯರಾಗಿದ್ದ ಪುಟ್ಟಣ್ಣ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದರು. ಇದೀಗ ಕಾಂಗ್ರೆಸ್ ಮತ್ತೆ ಪುಟ್ಟಣ್ಣಗೆ ತಮ್ಮ ರಾಜೀನಾಮೆಯಿಂದ ತೆರವಾಗಿದ್ದ ಅದೇ ಶಿಕ್ಷಕರ ಕ್ಷೇತ್ರದ ಟಿಕೆಟ್ ನೀಡಿದೆ.

    ಈಗಾಗಲೇ ವಿಧಾನ ಪರಿಷತ್‌ಗೆ ನಡೆಯುವ ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾರರ ಪಟ್ಟಿಯನ್ನು ಸಿದ್ದಪಡಿಸುವಂತೆ ಕೇಂದ್ರ ಚುನಾವಣಾ ಆಯೋಗ ಸೂಚನೆ ನೀಡಿದೆ. ಸೆಪ್ಟೆಂಬರ್ 30ರಿಂದ ಮತದಾರರ ನೋಂದಣಿ ಪ್ರಕ್ರಿಯೆ ಆರಂಭಿಸಲು ಸೂಚನೆ ನೀಡಿದೆ. ನವೆಂಬರ್ 6ರಂದು ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನವಾಗಿದೆ. ಮತದಾರರ ಕರಡು ಪಟ್ಟಿ ಸಿದ್ಧಪಡಿಸಲು ನ.20 ಕಡೆಯ ದಿನ. ನ.23 ರಂದು ಕರಡು ಪಟ್ಟಿಯನ್ನು ಪ್ರಕಟಿಸಬೇಕು. ನ.23 ರಿಂದ ಡಿ.9 ರವರೆಗೆ ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನ. ಡಿ.25 ರಂದು ಆಕ್ಷೇಪಣೆಗಳ ವಿಲೇವಾರಿ ನಡೆಯಲಿದೆ. ಡಿ.30 ರಂದು ಅಂತಿಮವಾಗಿ ಮತದಾರರ ಪಟ್ಟಿ ಪ್ರಕಟವಾಗಲಿದೆ.

    admin
    • Website

    Related Posts

    ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್

    March 1, 2026

    ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟುಕೊಡುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

    February 27, 2026

    ಮಹಿಳೆಯರು ಮತ್ತು ಮಂಗಳಮುಖಿಯರಿಗೆ ಉಚಿತ ಆಟೋ ಚಾಲನಾ ತರಬೇತಿ: ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

    February 27, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮೇಲ್ವರ್ಗ–ಕೆಳವರ್ಗ ಪದ ಬಳಕೆಯೇ ಸರಿ ಇಲ್ಲ: ಶಾಸಕ ಕೆ.ಎನ್.ರಾಜಣ್ಣ

    March 2, 2026

    ತುಮಕೂರು: ಯಾವುದೇ ಸಭೆ ಸಮಾರಂಭಗಳಲ್ಲಿ ಮೇಲ್ವರ್ಗದವರು, ಕೆಳವರ್ಗದವರು ಎಂಬ ಪದ ಬಳಕೆ ಮಾಡಬಾರದು. ಬದಲಾಗಿ ಮುಂದುವರಿದವರು ಮತ್ತು ಹಿಂದುಳಿದವರು ಎಂಬ…

    ಬಳ್ಳಾರಿ:  ಮಧ್ಯಪ್ರಾಚ್ಯ ದೇಶಗಳಲ್ಲಿನ ಬಿಕ್ಕಟ್ಟು — ಬಳ್ಳಾರಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ

    March 2, 2026

    ಗ್ಯಾರಂಟಿ ಯೋಜನೆ ಎಷ್ಟೇ ಹೊರೆಯಾದರೂ ಮುಂದುವರಿಯಬೇಕು: ಡಿ.ಕೆ.ಸುರೇಶ್

    March 1, 2026

    ಇರಾನ್ ಸರ್ವೋಚ್ಚ ನಾಯಕ ಆಯತೊಲ್ಲಾ ಖಮೇನಿ ಅಂತ್ಯ; ದೃಢಪಡಿಸಿದ ಇರಾನ್ ಸರ್ಕಾರಿ ಟಿವಿ

    March 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.