ಬೆಂಗಳೂರ: ನಮ್ಮ ಕ್ಲಿನಿಕ್ ಒಂದು ಕ್ರಾಂತಿಕಾರಿ ಹೆಜ್ಜೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಮಹಾಲಕ್ಷ್ಮೀ ಲೇಔಟ್ ನ ರಾಣಿ ಅಬ್ಬಕ್ಕದೇವಿ ಆಟದ ಮೈದಾನದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 108 ನಮ್ಮ ಕ್ಲಿನಿಕ್‍ಗಳ ಲೋಕಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಶಿಕ್ಷಣಕ್ಕೆ ಅತಿ ಹೆಚ್ಚಿನ ಮಹತ್ವ ನೀಡಲಾಗಿದೆ. ರಸ್ತೆಗಳ ನಿರ್ಮಾಣವಾಗಿದೆ. ಬಹಳಷ್ಟು ಅಭಿವೃದಿಯಾಗುತ್ತಿರುವುದನ್ನು ಬಿಂಬಿಸುವ ಮೂಲಕ ಬೆಂಗಳೂರು ಬ್ರಾಂಡ್ ನ್ನು ಹೆಚ್ಚಿಸುವ ಕೆಲಸ ಮಾಡಬೇಕೆಂದು ಕರೆ ನೀಡಿದ ಮುಖ್ಯಮಂತ್ರಿಗಳು, ಮೊದಲೆಲ್ಲಾ ಕೇವಲ ಸಮಾಲೋಚನೆ ನೀಡುವ ವೈದ್ಯರಿದ್ದರು. ಈಗ ಪ್ರಾಥಮಿಕ ಚಿಕಿತ್ಸೆ ಪಡೆದು ಗುಣಮುಖರಾಗುವ ಅವಕಾಶ ದೊರೆಯುತ್ತದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


