ಬೆಂಗಳೂರು: ಮಧ್ಯಮ ವರ್ಗದ ಜನರ ಜನಪ್ರಿಯ ಸಾರಿಗೆ ಎಂದೇ ಹೆಸರಾಗಿದ್ದ ನಮ್ಮ ಮೆಟ್ರೋ ಇದೀಗ ಬೆಲೆ ಏರಿಕೆಯ ಪರಿಣಾಮ ದುಬಾರಿಯಾಗಿದ್ದು, ಬಿಎಂಆರ್ ಸಿಎಲ್ ಮೆಟ್ರೋ ಪ್ರಯಾಣ ದರವನ್ನು ಶೇ.50ರಷ್ಟು ಏರಿಕೆ ಮಾಡಿ ಆದೇಶ ಹೊರಡಿಸಿದ ಬೆನ್ನಲ್ಲೇ ಸಾರ್ವಜನಿಕರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.
ದರ ಏರಿಕೆಯಿಂದ ವಿದ್ಯಾರ್ಥಿಗಳು ಪ್ರತಿ ತಿಂಗಳು 4 ಸಾವಿರ ರೂ. ಗೂ ಹೆಚ್ಚು ಪಾವತಿಸಿ ಪ್ರಯಾಣಿಸಬೇಕಿದೆ. ಇದು ತುಂಬಾ ಅನ್ಯಾಯ ಎಂದು ಪೋಷಕರು ಅಳಲು ತೋಡಿಕೊಂಡಿದ್ದಾರೆ.
ಮೆಟ್ರೋ ರೈಲಿನಲ್ಲಿ ದುಬಾರಿ ಹಣ ನೀಡಿ ಪ್ರಯಾಣಿಸುವುದಕ್ಕಿಂತ ಕಡಿಮೆ ಬೆಲೆಯಲ್ಲಿ ಬೈಕ್ ನಲ್ಲೇ ಕಚೇರಿಗಳಿಗೆ ತೆರಳುವುದು ಉತ್ತಮ. ಇದರಿಂದ ಸಾಕಷ್ಟು ಹಣ ಉಳಿಕೆ ಮಾಡಬಹುದು ಎಂದು ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೆಟ್ರೋ ಪ್ರಯಾಣ ದರ ಮಾತ್ರವಲ್ಲ ಪಾರ್ಕಿಂಗ್ ಶುಲ್ಕ ಎಲ್ಲವೂ ಸೇರಿ 200 ರೂ. ಬೇಕಾಗುತ್ತದೆ. ಇದಕ್ಕಿಂತ ಎಲೆಕ್ಟ್ರಿಕ್ ಬೈಕ್ ನಲ್ಲಿ ಪ್ರಯಾಣಿಸಿದರೆ, 100 ರೂ. ಉಳಿಯ ಮಾಡಬಹುದು ಎಂದು ಕೆಲವು ಪ್ರಯಾಣಿಕರು ಅಭಿಪ್ರಾಯಪಟ್ಟಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx