ನಮ್ಮರಾಜ್ಯಕ್ಕೆ ಬರಬೇಕಿರುವ ಜಿಎಸ್‌ಟಿ ಪಾಲನ್ನು ಕೊಡದಿದ್ದರೆ ಕೇಂದ್ರ ಸರ್ಕಾರಕ್ಕೆ ಜಿಎಸ್‌ಟಿ ಪಾವತಿ ಮಾಡುವುದನ್ನೇ ನಿಲ್ಲಿಸಬೇಕಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಚ್ಚರಿಕೆ ನೀಡಿದ್ದಾರೆ.
ಕೇಂದ್ರ ಸರ್ಕಾರ ಒಂದೋ ಜಿಎಸ್‌ಟಿ ಬಾಕಿಯನ್ನು ನೀಡಬೇಕು. ಇಲ್ಲದಿದ್ದರೆ ಅಧಿಕಾರದಿಂದ ಕೆಳಗಿಯಬೇಕು ಎಂದು ಮಮತಾ ಆಗ್ರಹಿಸಿದ್ದಾರೆ.
ನರೇಗಾ ಯೋಜನೆಯ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ ಸಿಎಂ ಇದನ್ನು ವಿರೋಧಿಸಿ ಬುಡಕಟ್ಟು ಮಂದಿ ಬೀದಿಗೆ ಇಳಿಯಬೇಕು ಎಂದು ಹೇಳಿದ್ದಾರೆ.
ನ್ಯಾಯಬದ್ಧವಾಗಿ ರಾಜ್ಯ ಸರ್ಕಾರಕ್ಕೆ ಬರಬೇಕಿರುವ ಪಾಲು ಪಡೆಯಲು ನಾವು ಕೇಂದ್ರ ಸರ್ಕಾರದ ಮುಂದೆ ಭಿಕ್ಷೆ ಬೇಡುವುದಿಲ್ಲ, ನರೇಗಾ ಯೋಜನೆಯ ಹಣ ಬಿಡುಗಡೆ ಮಾಡುತ್ತಿಲ್ಲ. ನೀಡಬೇಕಿರುವ ಹಣ ನೀಡದಿದ್ದರೆ ಬಿಜೆಪಿ ಸರ್ಕಾರ ಅಧಿಕಾರದಿಂದ ಕೆಳಗಿಳಿಯಬೇಕು ಎಂದು ಕಿಡಿ ಕಾರಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy