ಬೆಂಗಳೂರು: ನಮ್ಮ ಮುಂದಿನ ಯಾತ್ರೆ ವಿಜಯಯಾತ್ರೆ. ನಮ್ಮನ್ನ ಕಟ್ಟಿ ಹಾಕುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಬಿಜೆಪಿ 140 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ನಿಶ್ವಿತ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿಸ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದ ಸಾಧನೆಗಳನ್ನ ಜನರ ಮನೆಗಳಿಗೆ ಮುಟ್ಟಿಸುತ್ತೇವೆ.
ಪ್ರಧಾನಿ ಮೋದಿ , ಅಮಿತ್ ಶಾ, ಜೆಪಿ ನಡ್ಡಾ ನೇತೃತ್ವದಲ್ಲಿ ರಾಜ್ಯದಲ್ಲಿ ನಿಶ್ಚಿತವಾಗಿ ಗುರಿಯನ್ನು ತಲುಪಿ ಮತ್ತೆ ಅಧಿಕಾರಕ್ಕೆ ಬರಲಿದ್ದೇವೆ. ಯಾವ ಶಕ್ತಿ ಕೂಡ ನಾವು ಅಧಿಕಾರಕ್ಕೆ ಬರೋದನ್ನ ತಡೆಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


