ತಿಪಟೂರು: ತಾಲೂಕಿನ ಹೊನವಳ್ಳಿ ಹೋಬಳಿ ಗುರುಗದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕಾಲೋನಿಯಲ್ಲಿ ವಿದ್ಯುತ್ ಕಂಬ ಬೀಳುವ ಸ್ಥಿತಿಯಲ್ಲಿದ್ದು, ಸಾರ್ವಜನಿಕರಿಗೆ ಅಪಾಯಕಾರಿಯಾಗಿ ಪರಿಣಮಿಸಿತ್ತು. ನಮ್ಮತುಮಕೂರು.ಕಾಂ ವರದಿಯ ಬೆನ್ನಲ್ಲೇ ಬೆಸ್ಕಾಂ ಅಧಿಕಾರಿಗಳು ಸಮಸ್ಯೆಗೆ ಪರಿಹಾರ ಕಲ್ಪಿಸಿದ್ದಾರೆ.
ಗುರುಗದಹಳ್ಳಿ ವಿದ್ಯುತ್ ಕಂಬ ವಾಲಿನಿಂತಿತ್ತು. ಇದರಿಂದಾಗಿ ಇಲ್ಲಿನ ನಿವಾಸಿಗಳು ಆತಂಕದಲ್ಲಿದ್ದರು. ಮಕ್ಕಳು, ಮಹಿಳೆಯರು ಓಡಾಡುತ್ತಿದ್ದ ಸ್ಥಳದಲ್ಲಿ ಇಂತಹದ್ದೊಂದು ಅಪಾಯ ಸೃಷ್ಟಿಯಾಗಿರುವ ಬಗ್ಗೆ ನಮ್ಮ ತುಮಕೂರು.ಕಾಂ ಸವಿವರವಾದ ವರದಿಯನ್ನು ಪ್ರಕಟಿಸಿತ್ತು.
ವರದಿ ಪ್ರಕಟವಾದ ಬೆನ್ನಲ್ಲೇ ಸ್ಥಳಕ್ಕೆ ಬೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ, ಶೀಘ್ರವೇ ಕಂಬವನ್ನು ದುರಸ್ತಿಗೊಳಿಸುವುದಾಗಿ ಸ್ಥಳೀಯರಿಗೆ ಭರವಸೆ ನೀಡಿದ್ದರು. ಇದಾಗಿ ಮೂರು ನಾಲ್ಕು ದಿನದೊಳಗೆ ಅಧಿಕಾರಿಗಳು ಕ್ರಮಕೈಗೊಂಡಿದ್ದು, ಇಂದು ಹಳೆಯ ವಿದ್ಯುತ್ ಕಂಬವನ್ನು ತೆರವುಗೊಳಿಸಿ, ಹೊಸ ಕಂಬವನ್ನು ಹಾಕಿದ್ದಾರೆ.
ಇನ್ನೂ ಸಾರ್ವಜನಿಕರಿಗೆ ಅಪಾಯಕಾರಿಯಾಗಿ ಪರಿಣಮಿಸಿದ್ದ ಕಂಬದ ವಿಚಾರವಾಗಿ ವರದಿ ಪ್ರಕಟಿಸಿದ ಹಿನ್ನೆಲೆಯಲ್ಲಿ ತಕ್ಷಣದಲ್ಲಿಯೇ ಇಲ್ಲಿನ ನಿವಾಸಿಗಳಿಗೆ ಬೆಸ್ಕಾಂ ಸ್ಪಂದಿಸಿದ್ದು, ಈ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳು ನಮ್ಮ ತುಮಕೂರು.ಕಾಂಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ವರದಿ: ಮಂಜು, ಗುರುಗದಹಳ್ಳಿ
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700