ತುಮಕೂರು: ತಾಲೂಕಿನ ಹೋನವಳ್ಳಿ ಹೋಬಳಿಯ ಗುರುಗದಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಕಾಲೋನಿಯಲ್ಲಿ ವಿದ್ಯುತ್ ಕಂಬ ವಾಲಿ ನಿಂತಿರುವ ಬಗ್ಗೆ ಇಂದು ‘ನಮ್ಮತುಮಕೂರು.ಕಾಂ’ ವರದಿ ಪ್ರಕಟಿಸಿರುವ ಬೆನ್ನಲ್ಲೇ ಬೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
“ತಿಪಟೂರು: ವಾಲಿರುವ ವಿದ್ಯುತ್ ಕಂಬವನ್ನು ಸರಿಪಡಿಸುವಂತೆ ಗ್ರಾಮಸ್ಥರಿಂದ ಒತ್ತಾಯ” ಎಂಬ ಶೀರ್ಷಿಕೆಯಲ್ಲಿ ಗ್ರಾಮದಲ್ಲಿ ವಿದ್ಯುತ್ ಕಂಬ ವಾಲಿ ನಿಂತಿದ್ದು, ಇದರಿಂದ ಗ್ರಾಮಸ್ಥರು ಹಾಗೂ ವಾಹನ ಸವಾರರಿಗೆ ಅಪಾಯವಾಗುವ ಸಾಧ್ಯತೆ ಇದೆ ಎಂದು ನಮ್ಮತುಮಕೂರು.ಕಾಂ ವರದಿ ಮಾಡಿತ್ತು.
ನಮ್ಮತುಮಕೂರು ವರದಿಯ ಬೆನ್ನಲ್ಲೇ ಬೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಎರಡು ದಿನಗಳೊಳಗೆ ವಿದ್ಯುತ್ ಕಂಬವನ್ನು ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನಮ್ಮತುಮಕೂರು ಮಾಧ್ಯಮಕ್ಕೆ ಗ್ರಾಮಸ್ಥರು ಧನ್ಯವಾದಗಳನ್ನು ತಿಳಿಸಿದ್ದಾರೆ.
ವರದಿ: ಮಂಜು ಗುರುದಹಳ್ಳಿ
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700