ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನ ಘೋಷಿಸುವ ಅಧಿಕಾರ ನನಗಾಗಲಿ, ಸಿದ್ಧರಾಮಯ್ಯರಿಗಾಗಲಿ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು.
ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ನಿನ್ನೆ ಅಭ್ಯರ್ಥಿಯನ್ನ ಸಿದ್ಧರಾಮಯ್ಯ ಘೋಷಿಸಿದ್ಧ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಡಿ.ಕೆ ಶಿವಕುಮಾರ್, ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನ ಘೋಷಿಸುವ ಅಧಿಕಾರ ನನಗಾಗಲಿ ಸಿದ್ಧರಾಮಯ್ಯರಿಗಾಗಲಿ ಇಲ್ಲ. ಎಐಸಿಸಿಗೆ ಮಾತ್ರ ಅಭ್ಯರ್ಥಿಗಳನ್ನ ಘೋಷಿಸುವ ಅಧಿಕಾರವಿದೆ. ಮಲ್ಲಿಕಾರ್ಜುನ ಖರ್ಗೆಯೇ ನಮ್ಮ ಹೈಕಮಾಂಡ್ ಎಂದರು.
ಸಿದ್ದರಾಮಯ್ಯ ಅವರು ಗಂಗಾವತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಗ್ಗೆ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಕೆಲ ಸಂದರ್ಭಗಳಲ್ಲಿ ಕಳೆದ ಬಾರಿ ಸೋಲು ಕಂಡವರಿಗೆ ಉತ್ತೇಜನ ನೀಡುವ ಉದ್ದೇಶದಿಂದಲೂ ಹೇಳಿರಬಹುದು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


