ವಿಜಯಪುರ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿಯಿಂದ ನೋಟಿಸ್ ನೀಡಲಾಗಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ನನಗೆ ಯಾವುದೇ ನೋಟಿಸ್ ಬಂದಿಲ್ಲ. ಸುಮ್ಮನೆ ವದಂತಿ ಹಬ್ಬಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಈ ನಗರದಲ್ಲಿ ಮಾತನಾಡಿದ ಅವರು, ನನಗೆ ನೋಟಿಸ್ ಕೊಡುವಂತಹ ಪಕ್ಷ ವಿರೋಧಿ ಹೇಳಿಕೆ ನೀಡಿಲ್ಲ. ಭ್ರಷ್ಟರು ರಾಜಕೀಯ ಮುಂದುವರೆಸುವವರ ಬಗ್ಗೆ ನಾನು ಮಾತನಾಡಿದ್ದೇನೆ. ಇನ್ನು ಯಾಕೆ ನೋಟಿಸ್ ನೀಡಿಲ್ಲ ಎಂದು ಕೆಲವರಿಗೆ ಕಾಡುತ್ತಿದೆ. ಅದಕ್ಕೆ ಇಂತಹ ಊಹಾಪೋಹ ಹರಡಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


