ವೀಕೆಂಡ್ ಹಿನ್ನೆಲೆ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದು, ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿದ್ದು, ಪ್ರವಾಸಿಗರನ್ನು ನಿಭಾಯಿಸಲು ಹರಸಾಹಸ ಪಡುವಂತಾದರು.
ನಂದಿಬೆಟ್ಟ ನೋಡಲು ಸಾವಿರಾರು ಮಂದಿ ಪ್ರವಾಸಿಗರು ಕಾರು ಹಾಗೂ ಬೈಕ್‌ಗಳಲ್ಲಿ ಆಗಮಿಸಿದ್ದು, ನಂದಿಬೆಟ್ಟದ ರಸ್ತೆಯಲ್ಲಿ ವಾಹನಗಳು ಕಿಕ್ಕಿರಿದು ತುಂಬಿವೆ. ಮುಂಜಾನೆ 5 ಗಂಟೆಯಿಂದ ನಂದಿಬೆಟ್ಟದ ರಸ್ತೆ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿದ್ದು, ನಂದಿಗಿರಿಧಾಮ ಪೊಲೀಸರು ವಾಹನ ಸಂಚಾರ ದಟ್ಟಣೆ ನಿಭಾಯಿಸಲು ಹೈರಾಣಾದರು.
ರಸ್ತೆಯ ಎರಡು ಬದಿ ವಿರುದ್ಧ ದಿಕ್ಕಿನಲ್ಲೂ ವಾಹನಗಳು ನಿಂತಿದ್ದು ನಂದಿಬೆಟ್ಟದಿಂದ ವಾಪಾಸ್ ಬರುವವರು ಕೆಳಗೆ ಬರಲು ಪರದಾಡಬೇಕಾಯಿತು. ನಂದಿಬೆಟ್ಟಕ್ಕೆ ಬಂದ ಪ್ರವಾಸಿಗರು ಅತ್ತ ಮೇಲೂ ಹೋಗಲಾಗದೆ ಇತ್ತ ಕೆಳಗೆ ವಾಪಸ್ ಸಹ ಬರಲಾಗದೆ ಪರದಾಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


