ಬೆಂಗಳೂರು: ಕೆಎಂಎಫ್ನ ನಂದಿನಿ ರಾಷ್ಟ್ರ ಮಟ್ಟದ ಬ್ರ್ಯಾಂಡ್. ದೇಶದಲ್ಲಿ ನಂ.1 ಸ್ಥಾನಕ್ಕೆ ಏಳಿಗೆ ಹೊಂದಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ಶನಿವಾರ ಹೇಳಿದರು.
ಅಮುಲ್ ಉತ್ಪನ್ನಗಳು ಬೆಂಗಳೂರಿನಲ್ಲಿ ಮಾರಾಟವಾಗುವ ಬಗ್ಗೆ ತೀವ್ರ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿದ ಅವರು, ಅಮುಲ್ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು. ಅಮುಲ್ ಬ್ರ್ಯಾಂಡ್ ವಿಚಾರವಾಗಿ ಯಾರೂ ಆತಂಕಪಡಬೇಕಿಲ್ಲ. ನಂದಿನಿ ಬ್ರ್ಯಾಂಡ್ ಉತ್ಪನ್ನಗಳ ವೃದ್ಧಿಗೆ ಮತ್ತಷ್ಟು ಕ್ರಮಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.
ಈ ಮಧ್ಯೆ, ನಂದಿನಿ ಬ್ರ್ಯಾಂಡ್ ವಿಚಾರವಾಗಿ ಸ್ಪಷ್ಟನೆ ನೀಡಿದ ಸಚಿವ ಸುಧಾಕರ್, ಹಾಲಿಗೆ ಪ್ರೋತ್ಸಾಹ ಧನ ಕೊಟ್ಟಿದ್ದರೆ ಅದು ಬಿಜೆಪಿ ಸರ್ಕಾರ. ಪ್ರತಿ ಲೀಟರ್ ಗೆ 5 ರೂ. ಪ್ರೋತ್ಸಾಹ ಧನ ಬಿಜೆಪಿ ಸರ್ಕಾರ ಕೊಟ್ಟಿದೆ. ಕೆಎಂಎಫ್ ಆದಾಯದಲ್ಲಿ ಹಾಲು ಉತ್ಪಾದಕರಿಗೆ ಕೊಡುವ ವ್ಯವಸ್ಥೆ ಮಾಡಲಾಗಿದೆ. ನಂದಿನಿ ಹಾಲನ್ನು ಕೇವಲ ರಾಜ್ಯಕ್ಕೆ ಸೀಮಿತ ಮಾಡಬೇಡಿ. ಈಗಾಗಲೇ ಸೇನೆಗೆ, ತಿರುಪತಿ ತಿರುಮಲ, ಮಹಾರಾಷ್ಟ್ರಕ್ಕೆ ನಮ್ಮ ಹಾಲು ಪೂರೈಕೆಯಾಗುತ್ತಿದೆ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA