nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಗಣೇಶ ವಿಸರ್ಜನೆ ವೇಳೆ ಸಿಂಹಾದ್ರಿ ಹತ್ಯೆ – ಸಂತ್ರಸ್ತ ಕುಟುಂಬಕ್ಕೆ ಸಿಪಿಐ(ಎಂ), ಸಿಐಟಿಯು ಹಾಗೂ ಪಿಯುಸಿಎಲ್ ನಿಯೋಗದಿಂದ ಸಾಂತ್ವನ

    September 25, 2026

    ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ

    September 24, 2026

    100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ

    September 24, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಗಣೇಶ ವಿಸರ್ಜನೆ ವೇಳೆ ಸಿಂಹಾದ್ರಿ ಹತ್ಯೆ – ಸಂತ್ರಸ್ತ ಕುಟುಂಬಕ್ಕೆ ಸಿಪಿಐ(ಎಂ), ಸಿಐಟಿಯು ಹಾಗೂ ಪಿಯುಸಿಎಲ್ ನಿಯೋಗದಿಂದ ಸಾಂತ್ವನ
    • ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ
    • 100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ
    • ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!
    • ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ
    • ಕೇಂದ್ರೀಯ ರೇಷ್ಮೆ ಮಂಡಳಿಯಲ್ಲಿ ಉದ್ಯೋಗಾವಕಾಶ: ಪದವಿಧರರಿಗೆ 17 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಅನುಕಂಪದ ಆಧಾರದ ಮೇಲೆ ನೇಮಕಗೊಂಡವರು ಉನ್ನತ ಹುದ್ದೆಗಳನ್ನು ಕೇಳುವಂತಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು
    • ಹಣಕಾಸು ಇಲಾಖೆಯ ಸಲಹೆ ರಾಜಕೀಯ ಮಾಡುವ ವಿಷಯವಲ್ಲ, ಬಿಜೆಪಿ ಪ್ರತಿಭಟಿಸಲಿ: ಡಿ.ಕೆ. ಶಿವಕುಮಾರ್ ತಿರುಗೇಟು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಂದಿಬೆಟ್ಟ ರೋಪ್-ವೇ ನಿರ್ಮಾಣಕ್ಕೆ ಅನುಮೋದನೆ
    ರಾಜ್ಯ ಸುದ್ದಿ February 20, 2022

    ನಂದಿಬೆಟ್ಟ ರೋಪ್-ವೇ ನಿರ್ಮಾಣಕ್ಕೆ ಅನುಮೋದನೆ

    By adminFebruary 20, 2022No Comments2 Mins Read

    ಜನಪ್ರಿಯ ಪ್ರವಾಸಿ ತಾಣ ನಂದಿ ಗಿರಿಧಾಮವನ್ನು ಪ್ರವಾಸೋದ್ಯಮ ತಾಣವಾಗಿ ಬೆಳೆಸುವ ಉದ್ದೇಶದೊಂದಿಗೆ ರೂಪಿಸಿರುವ ರೋಪ್-ವೇ ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.ನಂದಿ ಬೆಟ್ಟ ಕೆಲವೇ ವರ್ಷಗಳಲ್ಲಿ ಅತ್ಯಂತ ಆಕರ್ಷಣೀಯ ಪ್ರವಾಸಿ ಸ್ಥಳವಾಗಿ ಅಭಿವೃದ್ಧಿಯಾಗಲಿದೆ. ಇದು ಜಿಲ್ಲೆಯ ಆರ್ಥಿಕಾಭಿವೃದ್ಧಿಯಲ್ಲಿ ಮಹತ್ವದ ಮೈಲುಗಲ್ಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

    ಬೆಂಗಳೂರಿನಿಂದ 60 ಕಿ.ಮೀ. ದೂರದಲ್ಲಿರುವ ನಂದಿ ಗಿರಿಧಾಮ ಆಕರ್ಷಣೀಯ ಪ್ರವಾಸಿ ತಾಣವಾಗಿದ್ದು, ಪ್ರವಾಸಿಗರಿಗೆ ವಾರಾಂತ್ಯದಲ್ಲಿ ಭೇಟಿ ನೀಡಲು ಸೂಕ್ತ ಸ್ಥಳವಾಗಿದೆ. ಪಾರಂಪರಿಕ ಸ್ಮಾರಕ, ಕೋಟೆ, ಮನಸ್ಸಿಗೆ ಮುದ ನೀಡುವ ಪರಿಸರದಿಂದಾಗಿ ಇದು ಪ್ರವಾಸಿಗರ ಆಕರ್ಷಣೆ ಕೇಂದ್ರಬಿಂದುವಾಗಿದೆ. ಈ ಭಾಗದಲ್ಲಿ ಅಗತ್ಯ ಮೂಲಸೌಕರ್ಯ ಕಲ್ಪಿಸಿದರೆ ಬೇರೆ ದೇಶಗಳಿಂದಲೂ ಪ್ರವಾಸಿಗರನ್ನು ಸೆಳೆಯಬಹುದು ಎಂಬ ಅಂಶ ಗಮನಕ್ಕೆ ಬಂದಿತ್ತು. ಈ ನಿಟ್ಟಿನಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ DBFOT ಮಾದರಿಯಲ್ಲಿ ರೋಪ್-ವೇ ನಿರ್ಮಿಸುವ ಯೋಜನೆಯನ್ನು ರೂಪಿಸಲಾಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 93.40 ಕೋಟಿ ರೂ. ವೆಚ್ಚದ ಪ್ರವಾಸೋದ್ಯಮ ಇಲಾಖೆಯ ಈ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ.

    ಈ ಯೋಜನೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರವಾಸಿಗರ ಗಮನ ಸೆಳೆಯಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.ನಂದಿ ಬೆಟ್ಟದ ತಪ್ಪಲಿನಿಂದ ಸುಮಾರು 2.93 ಕಿ.ಮೀ. ಎತ್ತರದ ಬೆಟ್ಟ ಪ್ರದೇಶಕ್ಕೆ ರೋಪ್-ವೇ ನಿರ್ಮಿಸಿ ಪ್ರವಾಸಿಗರನ್ನು ಕರೆದೊಯ್ಯಲು ಉದ್ದೇಶಿಸಿದ್ದು, ಲ್ಯಾಂಡಿಂಗ್ ಸ್ಟೇಷನ್ (ಇಳಿಯುವ ಸ್ಥಳ) ಬೆಟ್ಟದ ತಳಭಾಗ ಹಾಗೂ ಮೇಲ್ಭಾಗದ ಎರಡೂ ಕಡೆ ಇರುವಂತೆ ಯೋಜನೆ ರೂಪಿಸಲಾಗಿದೆ. ಇದರಲ್ಲಿ ಒಟ್ಟು 18 ಟವರ್‍ಗಳನ್ನು ನಿರ್ಮಿಸಲಾಗುತ್ತದೆ.

    ಇದರ ಜೊತೆಗೆ ರೆಸ್ಟೋರೆಂಟï, ಕೆಫೆ, ಆಹಾರ ಮಳಿಗೆ, ಇತರೆ ಮಳಿಗೆಗಳನ್ನು ನಿರ್ಮಿಸಲು ಅವಕಾಶವಿರುತ್ತದೆ. ರೋಪ್-ವೇನಲ್ಲಿ 50 ಕ್ಯಾಬಿನ್ ಗಳಿರಲಿದ್ದು, ಪ್ರತಿಯೊಂದರಲ್ಲೂ 10 ಮಂದಿ ಪ್ರಯಾಣಿಸಬಹುದು. ಒಟ್ಟು 28 ನಿಮಿಷಗಳಲ್ಲಿ ಕ್ರಮಿಸಬಹುದು ಎಂದು ಸಚಿವರು ವಿವರಿಸಿದ್ದಾರೆ.

    ಈ ಯೋಜನೆಯಿಂದಾಗಿ ಚಿಕ್ಕಬಳ್ಳಾಪುರದ ಇತಿಹಾಸ, ಪರಂಪರೆ, ನಿಸರ್ಗ ರಮಣೀಯತೆ ಹೊರಜಗತ್ತಿಗೆ ತಿಳಿದುಬರಲಿದೆ. ಹೆಚ್ಚು ಪ್ರವಾಸಿಗರು ಬರುವುದರಿಂದ ಉದ್ಯೋಗ ಸೃಷ್ಟಿಯೂ ಸಾಧ್ಯವಾಗಿ, ಸ್ಥಳೀಯ ಆರ್ಥಿಕತೆ ಅಭಿವೃದ್ಧಿಯಾಗಲಿದೆ. ಸೂರ್ಯೋದಯ ಹಾಗೂ ಸೂರ್ಯಾಸ್ತಮಾನದ ಸಮಯದಲ್ಲಿ ಹೆಚ್ಚು ಜನರು ಖಾಸಗಿ ವಾಹನಗಳಲ್ಲಿ ಬಂದು ಬೆಟ್ಟಕ್ಕೆ ತೆರಳುತ್ತಾರೆ.

    ರೋಪ್-ವೇ ನಿಂದಾಗಿ ಪರಿಸರ ಸ್ನೇಹಿ ವಾತಾವರಣ ಸೃಷ್ಟಿಯಾಗುವುದರೊಂದಿಗೆ ಸಂಚಾರ ದಟ್ಟಣೆ ಕಡಿಮೆಯಾಗಲಿದೆ. ಜೊತೆಗೆ ಜನಜಂಗುಳಿಯನ್ನು ಸುಲಭವಾಗಿ ನಿರ್ವಹಣೆ ಮಾಡಬಹುದು. ರೋಪ್ -ವೇ ನಲ್ಲಿನ ಸಂಚಾರದ ವೇಳೆ ಪ್ರವಾಸಿಗರು ವಿಹಂಗಮ ನೋಟವನ್ನೂ ಕಣ್ತುಂಬಿಕೊಳ್ಳಬಹುದು. ಈ ಯೋಜನೆಯಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಗೂ ಉತ್ತಮ ಹೆಸರು ಬರಲಿದೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ

    September 24, 2026

    100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ

    September 24, 2026

    ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!

    September 24, 2026

    Leave A Reply Cancel Reply

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಗಣೇಶ ವಿಸರ್ಜನೆ ವೇಳೆ ಸಿಂಹಾದ್ರಿ ಹತ್ಯೆ – ಸಂತ್ರಸ್ತ ಕುಟುಂಬಕ್ಕೆ ಸಿಪಿಐ(ಎಂ), ಸಿಐಟಿಯು ಹಾಗೂ ಪಿಯುಸಿಎಲ್ ನಿಯೋಗದಿಂದ ಸಾಂತ್ವನ

    September 25, 2026

    ತುಮಕೂರು: ಮಧುಗಿರಿ ತಾಲೂಕಿನ ಮಿಡಿಗೇಶಿ ಹೋಬಳಿ ಕಾಶಪುರ ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ದಲಿತ ಯುವಕ ಸಿಂಹಾದ್ರಿ ಹತ್ಯೆ…

    ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ

    September 24, 2026

    100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ

    September 24, 2026

    ಮೈಸೂರು ದಸರಾ: ಸ್ತಬ್ಧಚಿತ್ರ ಪ್ರದರ್ಶನ 15 ಜಿಲ್ಲೆಗಳಿಗೆ ಸೀಮಿತ; ಡಿಸಿಎಂ ಪರಮೇಶ್ವರ್ ತವರು ತುಮಕೂರಿಗೆ ಅವಕಾಶವಿಲ್ಲ!

    September 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.