ಬೆಂಗಳೂರು: ನಂದಿನಿ ಹಾಲಿನ ದರ ಪ್ರತಿ ಲೀಟರ್ಗೆ 3 ರೂ. ಹೆಚ್ಚಳ ಮಾಡಿದ್ದು, ಆಗಸ್ಟ್ 1ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ಶುಕ್ರವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಕೆಎಂಎಫ್ ಪ್ರತಿ ಲೀಟರ್ ಗೆ 5 ರೂಪಾಯಿ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದ್ರೆ 3 ರೂಪಾಯಿ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ.
ಹೆಚ್ಚಳವಾದ 3 ರೂಪಾಯಿ ಹಾಲು ಉತ್ಪಾದಕರಿಗೆ ಸೇರಬೇಕು ಎಂದು ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಪಶುಸಂಗೋಪನ ಇಲಾಖೆ ಸಚಿವ ಕೆ.ವೆಂಕಟೇಶ್, ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್, ಆಡಳಿತ ಮಂಡಳಿ ಸದಸ್ಯರು ಮತ್ತು ಕೆಎಂಎಫ್ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


