ಬಿಎಸ್ ವೈಗೆ ಬಿಜೆಪಿ ಅನ್ಯಾಯ ಮಾಡಿದೆ ಅಂತಾರೆ. ನನಗೆ ಕೊಟ್ಟಷ್ಟು ಅವಕಾಶ ಯಾರಿಗೂ ಕೊಟ್ಟಿಲ್ಲ ಬಿಜೆಪಿ ಅವಕಾಶ ಕೊಟ್ಟಿದ್ದಕ್ಕೆ ನಾನು ನಾಲ್ಕು ಬಾರಿ ಸಿಎಂ ಆಗಿದ್ಧೆ. ಸೂರ್ಯ ಚಂದ್ರ ಇರುವವರೆಗೂ ಬಿಜೆಪಿ ಗೆಲುವು ಸಾಧಿಸುತ್ತದೆ. ನಾನು ಎಲ್ಲಾ ಕ್ಷೇತ್ರಗಳಲ್ಲೂ ಪ್ರವಾಸ ಮಾಡುವೆ ಎಂದರು.
ಬಜೆಟ್ ಬಗ್ಗೆ ಜನರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ. ಸಿದ್ದರಾಂಯ್ಯ ಮಾತು ಗಮನಿಸಿದ್ದೇನೆ. ಡಬಲ್ ಇಂಜಿನ್ ಸರ್ಕಾರದ ಬಗ್ಗೆ ಮಾತನಾಡಿದ್ದಾರೆ ಎಂದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗೆದ್ಧ ಬಾದಾಮಿ ಕ್ಷೇತ್ರವನ್ನ ಬಿಟ್ಟು ಸಿದ್ಧರಾಮಯ್ಯ ಕೋಲಾರದಲ್ಲಿ ಸ್ಪರ್ಧಿಸಲು ಮುಂದಾಗಿರುವ ಬಗ್ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಟೀಕಿಸಿದ್ದಾರೆ.
ಈ ಕುರಿತು ಮಾತನಾಡಿರುವ ಬಿಎಸ್ ವೈ, ಬಾದಾಮಿಯಿಂದ ಸ್ಪರ್ಧಿಸಲು ಸಿದ್ಧರಾಮಯ್ಯಗೆ ಧೈರ್ಯವಿಲ್ಲ. ಗೆದ್ದ ಕ್ಷೇತ್ರದಲ್ಲಿ ಅಭಿವೃದ್ದಿ ಮಾಡಿಲ್ಲವಾ..? ಜನ ಹೇಗೆ ನಿಮ್ಮನ್ನ ನಂಬುತ್ತಾರೆ. ಬಾದಾಮಿಯಲ್ಲಿ ಸ್ಪರ್ಧಿಸಿದ್ರೆ ಜನರ ಋಣ ತೀರಿಸಬಹುದು ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


