ನನ್ನ ಅವಧಿಯಲ್ಲಿ ಒಂದೇ ಒಂದು ಪೈಸೆ ಲಂಚ ತೆಗೆದುಕೊಂಡರೇ ತೋರಿಸಲಿ. ನಾನು ರಾಜಕೀಯ ನಿವೃತ್ತಿ ಪಡೆದು ಸನ್ಯಾಸತ್ವ ಸ್ವೀಕರಿಸುತ್ತೇನೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಸವಾಲು ಹಾಕಿದರು.
ಕೋಲಾರದ ಟಮಕ ಬಳಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ಹೈಕಮಾಂಡ್ ಒಪ್ಪಿಗೆ ಕೊಟ್ಟರೆ ನಾನು ಕೋಲಾರದಲ್ಲಿ ಸ್ಪರ್ಧೆ ಮಾಡ್ತೇನೆ. ನಾನು ಈಗಾಗಲೇ ಹೇಳಿರುವಂತೆ ಪಕ್ಷದ ಹೈಕಮಾಂಡ್ ಸೂಚಿಸಿದರೆ ಕೋಲಾರದಿಂದ ಸ್ಪರ್ಧಿಸುತ್ತೇನೆ ಎಂದು ಸ್ಪಷ್ಟನೆ ನೀಡಿದರು.
ಹಾಗೆಯೇ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಕಾಣುತ್ತಿದೆ. ಹೀಗಾಗಿ ಬಿಜೆಪಿಯವರು ಹೆದರಿಕೊಂಡು ವಾರಕ್ಕೊಂದು ಸಲ ಮೋದಿಯವರನ್ನು ಕರೆಸುತ್ತಿದ್ದಾರೆ. ಮೋದಿ ಮತ್ತೆ ನಮಗೆ ಅಧಿಕಾರ ಕೊಡಸ್ತಾರೆ ಅನ್ನೋ ಭರವಸೆಯಲ್ಲಿದ್ದಾರೆ. ಬಿಜೆಪಿಯುವರಿಗೆ ಮೋದಿಯೇ ಬಂಡವಾಳ. 100 ಸಾರಿ ಮೋದಿ ಅಮಿತ್ ಶಾ ಬಂದು ಕ್ಯಾಂಪ್ ಮಾಡಿದರೂ ಕೂಡ ಕಾಂಗ್ರೆಸ್ ಅಧಿಕಾರಕ್ಕೆ ಬರುವುದನ್ನ ತಡೆಯಲು ಸಾಧ್ಯವಿಲ್ಲ ಎಂದು ಸಿದ್ಧರಾಮಯ್ಯ ಟಾಂಗ್ ನೀಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


