ಸಚಿವ ವಿ. ಸೋಮಣ್ಣ ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿ ಬೆನ್ನಲ್ಲೆ ಡಿ.ಕೆ ಶಿವಕುಮಾರ್ ಮತ್ತು ಸೋಮಣ್ಣ ಒಟ್ಟಿಗೆ ಕುಳಿತು ಮಾತನಾಡುತ್ತಿರುವ ದೃಶ್ಯದ ಫೋಟೊ ವೈರಲ್ ಆಗಿದ್ದು ಈ ಕುರಿತು ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ಸೋಮಣ್ಣ, ಡಿಕೆ ಶಿವಕುಮಾರ್ ಮತ್ತು ನಾನು ಇರುವ ಆ ಫೋಟೊ ಯಾವುದೋ ಕಾಲದ್ದು. ಆದರೆ ಈಗ ಫೋಟೊ ವೈರಲ್ ಆಗಿದೆ. ಈಗ ವೈರಲ್ ಮಾಡಿದ್ರೆ ಏನು ಮಾಡೋಕೆ ಆಗಲ್ಲ ಎಂದರು.
ನಾನು ಬಿಜೆಪಿ ಶಾಸಕ, ಬಿಜೆಪಿ ಸರ್ಕಾರದ ಮಂತ್ರಿ. ನನಗೆ ಇತಿಮಿತಿ ಗೊತ್ತಿದೆ. ನಾನು ಯಾರ ಹತ್ತಿರನೂ ಹೇಳಿಸಿಕೊಳ್ಳಲ್ಲ. ಬಿಜೆಪಿಯಲ್ಲಿ ಸಕ್ರಿಯವಾಗಿ ಕೆಲಸ ಮಾಡತ್ತೇನೆ. ಬಿಜೆಪಿ ಪಕ್ಷದ ನಾಯಕನಾಗಿ ಕೆಲಸ ಮಾಡುತ್ತೇನೆ. ಪ್ರಧಾನಿ ಮೋದಿ, ಅಮಿತ್ ಶಾ ಸಿಎಂ ಬೊಮ್ಮಾಯಿ ನಾಯಕತ್ವ ಇದೆ ಎಂದು ಸಚಿವ ವಿ.ಸೋಮಣ್ಣ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


